Home Mangalorean News Kannada News ಕುಂದಾಪುರ| ರಾಹುಲ್ ಗಾಂಧಿ ಹುಟ್ಟುಹಬ್ಬ: ಯುವ ಕಾಂಗ್ರೆಸ್ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು...

ಕುಂದಾಪುರ| ರಾಹುಲ್ ಗಾಂಧಿ ಹುಟ್ಟುಹಬ್ಬ: ಯುವ ಕಾಂಗ್ರೆಸ್ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Spread the love

ಕುಂದಾಪುರ| ರಾಹುಲ್ ಗಾಂಧಿ ಹುಟ್ಟುಹಬ್ಬ: ಯುವ ಕಾಂಗ್ರೆಸ್ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಕುಂದಾಪುರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಕುಂದಾಪುರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ್ ಶೆಟ್ಟಿ, ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಭಿಜಿತ್ ಪೂಜಾರಿ ಹೇರಿಕುದ್ರು, ಆನಗಳ್ಳಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಆದರ್ಶ್ ಶೆಟ್ಟಿ ಹೇರಿಕುದ್ರು, ಆನಗಳ್ಳಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಗೀತಾ ಎಸ್., ಮಾಜಿ ಅಧ್ಯಕ್ಷೆ ಸವಿತಾ ಬಿಲ್ಲವ, ಸತೀಶ್ ತೊಪ್ಲು, ಜೊಯ್ ರೆಬೆಲ್ಲೋ, ಗ್ಯಾರಂಟಿ ಅನುಷ್ಠಾನ ಸಮಿತಿಯ ಆಶಾ ಕರ್ವಾಲೋ ಹಾಗೂ ಸಹರಾ ಕರ್ವಾಲೋ ಉಪಸ್ಥಿತರಿದ್ದರು.

ಇದೇ ವೇಳೆ ಹಂಗಳೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸುಧಾಕರ ಹಂಗಳೂರು, ರೋಶನ್ ಬರೆಟ್ಟೊ, ಪುರಸಭೆಯ ನಾಮನಿರ್ದೇಶಿತ ಸದಸ್ಯರಾದ ಅಶೋಕ್ ಸುವರ್ಣ, ಎಡಾಲ್ಪ್ ಡಿಕೊಸ್ಟಾ, ಕೋಣಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಸೌಮ್ಯ ಮೋಗವೀರ, ಮುನಾವರ್ ಕೋಡಿ, ಹಸೈನಾರ್ ಕೋಡಿ, ಮುಬಾರಕ್ ಕೋಡಿ, ಜೋಸೆಫ್ ರೆಬೆಲ್ಲೋ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.


Spread the love

Exit mobile version