Home Mangalorean News Kannada News ಟ್ರೆಕ್ಕಿಂಗ್ ಹೋಗಿದ್ದ ಕುಂದಾಪುರದ ಮಯೂರ ಮೆಡಿಕಲ್ ಮಾಲಕಿ ನದಿಯಲ್ಲಿ ಮುಳುಗಿ ಸಾವು

ಟ್ರೆಕ್ಕಿಂಗ್ ಹೋಗಿದ್ದ ಕುಂದಾಪುರದ ಮಯೂರ ಮೆಡಿಕಲ್ ಮಾಲಕಿ ನದಿಯಲ್ಲಿ ಮುಳುಗಿ ಸಾವು

Spread the love

ಟ್ರೆಕ್ಕಿಂಗ್ ಹೋಗಿದ್ದ ಕುಂದಾಪುರದ ಮಯೂರ ಮೆಡಿಕಲ್ ಮಾಲಕಿ ನದಿಯಲ್ಲಿ ಮುಳುಗಿ ಸಾವು

ಕುಂದಾಪುರ: ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1ರ ರವಿವಾರ ನಡೆದಿದೆ.

ಕುಂದಾಪುರದ ಮೆಡಿಕಲ್ ಶಾಪ್ ವೊಂದರ ಮಾಲಕಿ ಶುಭಶ್ರೀ ಕಾರಂತ್ ( 53) ಸಾವನ್ನಪ್ಪಿದವರು.

ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರೆಕ್ಕಿಂಗ್ ಹೋಗಿದ್ದರು ಎಂದು ತಿಳಿದು ಬಂದಿದೆ.

ಮೃತದೇಹವನ್ನು ಕುಂದಾಪುರಧ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


Spread the love

Exit mobile version