Home Mangalorean News Kannada News ಸರ್ಕಾರಿ ಪಿಯು ಕಾಲೇಜುಗಳ ವಿಳಂಬ ದಾಖಲಾತಿ ದಂಡ ಶುಲ್ಕ ರದ್ದು: ರಾಜ್ಯ ಸರ್ಕಾರದ ಕ್ರಮಕ್ಕೆ ಅಲೆವೂರು...

ಸರ್ಕಾರಿ ಪಿಯು ಕಾಲೇಜುಗಳ ವಿಳಂಬ ದಾಖಲಾತಿ ದಂಡ ಶುಲ್ಕ ರದ್ದು: ರಾಜ್ಯ ಸರ್ಕಾರದ ಕ್ರಮಕ್ಕೆ ಅಲೆವೂರು ಹರೀಶ್ ಕಿಣಿ ಸ್ವಾಗತ

Spread the love

ಸರ್ಕಾರಿ ಪಿಯು ಕಾಲೇಜುಗಳ ವಿಳಂಬ ದಾಖಲಾತಿ ದಂಡ ಶುಲ್ಕ ರದ್ದು: ರಾಜ್ಯ ಸರ್ಕಾರದ ಕ್ರಮಕ್ಕೆ ಅಲೆವೂರು ಹರೀಶ್ ಕಿಣಿ ಸ್ವಾಗತ

ಉಡುಪಿ: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ವಿಳಂಬವಾಗಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಂದ ವಿಧಿಸಲಾಗುತ್ತಿದ್ದ ʻವಿಳಂಬ ದಾಖಲಾತಿ ದಂಡ ಶುಲ್ಕʼವನ್ನು ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ಸ್ವಾಗತಿಸಿದ್ದಾರೆ.

ರಾಜ್ಯ ಸರ್ಕಾರವು ಈ ಶೈಕ್ಷಣಿಕ ವರ್ಷ (2026-27)ದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ವಿಳಂಬವಾಗಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳ ಮೇಲೆ ವಿಧಿಸಲಾಗುತ್ತಿದ್ದ ₹670 ವಿಳಂಬ ದಾಖಲಾತಿ ದಂಡ ಶುಲ್ಕ (10 ದಿನಗಳವರೆಗೆ) ಹಾಗೂ ₹2,220 ವಿಶೇಷ ದಂಡ ಶುಲ್ಕವನ್ನು (20 ದಿನಗಳವರೆಗೆ) ಸಂಪೂರ್ಣವಾಗಿ ರದ್ದುಪಡಿಸಿ ಆದೇಶ ಹೊರಡಿಸಿದೆ.

ಈ ಕ್ರಮದಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಮೇಲಿನ ಹೆಚ್ಚುವರಿ ಆರ್ಥಿಕ ಹೊರೆ ಕಡಿಮೆಯಾಗಲಿದ್ದು, ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿ ಸ್ನೇಹಿ ನಿರ್ಧಾರ ಕೈಗೊಂಡು ವಿಳಂಬ ದಾಖಲಾತಿ ದಂಡ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಅಲೆವೂರು ಹರೀಶ್ ಕಿಣಿ ಕೃತಜ್ಞತೆ ಸಲ್ಲಿಸಿದ್ದಾರೆ.


Spread the love

Exit mobile version