ಚಿತ್ರಕಲಾ ಸ್ಪರ್ಧೆಗಳು ಮಕ್ಕಳ ಸುಪ್ತ ಸೃಜನಶೀಲತೆ ಅನಾವರಣಕ್ಕೆ ವೇದಿಕೆಯಾಗಲಿ : ಯಶ್ಪಾಲ್ ಸುವರ್ಣ

Spread the love

ಚಿತ್ರಕಲಾ ಸ್ಪರ್ಧೆಗಳು ಮಕ್ಕಳ ಸುಪ್ತ ಸೃಜನಶೀಲತೆ ಅನಾವರಣಕ್ಕೆ ವೇದಿಕೆಯಾಗಲಿ : ಯಶ್ಪಾಲ್ ಸುವರ್ಣ

ಉಡುಪಿ: ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಉದ್ಘಾಟನೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ ಉಚ್ಚಿಲ ಮಹಾಲಕ್ಷ್ಮೀ ತಾಯಿಯ ಸನ್ನಿಧಿಯಲ್ಲಿ ನಡೆಯುವ ಈ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳ ಸುಪ್ತ ಸೃಜನಶೀಲತೆ ಅನಾವರಣಕ್ಕೆ ಈ ಕಾರ್ಯಕ್ರಮ ವೇದಿಕೆಯಾಗಿ ಚಿತ್ರಕಲೆಯ ಮೂಲಕ ಎಳವೆಯಿಂದಲೇ ಧಾರ್ಮಿಕ ಪ್ರಜ್ಞೆ ಮೂಡುವಂತಾಗಲಿ ಎಂದು ಹೇಳಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮೀ ಬ್ಯಾಂಕ್ ಮತ್ತು ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಸಂಸ್ಥೆಯ ಮೂಲಕ ಉಚ್ಚಿಲ ದಸರಾ ಮಹೋತ್ಸವಕ್ಕೆ ವಿಶೇಷ ಸಹಕಾರ ನೀಡುವ ಜೊತೆಗೆ ಚಿತ್ರಕಲೆ, ಕಿನ್ನಿ ಪಿಲಿ ಹಾಗೂ ಪೊಣ್ಣು ಪಿಲಿ ನಲಿಕೆ ಸ್ಪರ್ಧೆಗಳ ಆಯೋಜನೆಯ ಮೂಲಕ ದಸರಾ ಮಹೋತ್ಸವಕ್ಕೆ ಹೊಸ ಮೆರಗು ನೀಡಿದೆ ಎಂದರು.

ಸಮಾರಂಭದಲ್ಲಿ ಮಲ್ಪೆ ಮೀನುಗಾರರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ದಯಾನಂದ ಕೆ. ಸುವರ್ಣ, ಮಲ್ಪೆ ಯಾಂತ್ರಿಕ ಟ್ರಾಲ್ ದೋಣಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಅಧ್ಯಕ್ಷರಾದ ರಾಮಚಂದ್ರ ಕುಂದರ್, ಉಚ್ಚಿಲ ದಸರಾ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ವಿನಯ ಕರ್ಕೇರ, ಬ್ಯಾಂಕಿನ ಉಪಾಧ್ಯಕ್ಷರಾದ ವಾಸುದೇವ ಸಾಲ್ಯಾನ್, ನಿರ್ದೇಶಕರಾದ ಶಶಿಕಾಂತ್ ಪಡುಬಿದ್ರೆ, ಶೋಭೇಂದ್ರ ಸಾಲ್ಯಾನ್, ವನಜ ಪುತ್ರನ್, ವ್ಯವಸ್ಥಾಪಕ ನಿರ್ದೇಶಕರಾದ ಶರತ್ ಕುಮಾರ್ ಶೆಟ್ಟಿ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶಾರಿಕಾ ಕಿರಣ್, ಆನಂದ ಸೆಲ್ವಂ ಉಪಸ್ಥಿತರಿದ್ದರು. ಬ್ಯಾಂಕಿನ ಸಿಬ್ಬಂದಿ ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.


Spread the love
Subscribe
Notify of

0 Comments