ಮೇ 14-19 ರವರೆಗೆ ಕೊಡವೂರು ಶ್ರೀ ಶಂಕರನಾರಾಯಣ ಸನ್ನಿಧಾನದಲ್ಲಿ ಮಹಾ ರುದ್ರಯಾಗ
ಉಡುಪಿ: ಮಹತೋಭಾರ ಶ್ರೀ ಶಂಕರನಾರಾಯಣ ಸನ್ನಿಧಾನದ ಕೊಡವೂರಿನಲ್ಲಿ ಲೋಕ ಕಲ್ಯಾಣಾರ್ಥ ನಾಡಿನ ಜನರ ಸುಭೀಕ್ಷೆಗಾಗಿ ಅಪರೂಪದಲ್ಲಿ ಅಪರೂಪದ ಮಹಾ ರುದ್ರಯಾಗ ಮೇ 14 ರಿಂದ ಮೇ19 ರವರೆಗೆ ಸಂಪನ್ನಗೊಳ್ಳಲಿದೆ ಎಂದು ಮಹಾ ರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಸೇವಾಕರ್ತರು ಆಗಿರುವ ಪ್ರಸಾದ್ ರಾಜ್ ಕಾಂಚನ್ ಹೇಳಿದರು.
ಅವರು ಶನಿವಾರ ದೇವಸ್ಥಾನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೊಡವೂರಿನ ಪುಣ್ಯ ನೆಲದಲ್ಲಿ ಹಮ್ಮಿಕೊಳ್ಳಲಾದ ಈ ಪುಣ್ಯ ಕಾರ್ಯದ ಸಂಧರ್ಭ ವಿವಿಧ ಧಾರ್ಮಿಕ,ಮನರಂಜನೆ ,ಕ್ರೀಡೋತ್ಸವ ,ಅರೋಗ್ಯ ಶಿಬಿರ ,ಉದ್ಯೋಗ ಮೇಳಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಮಹಾರುದ್ರ ಯಾಗದ ಸುಸಂಧರ್ಭ ವನ್ನು ನಾಡ ಹಬ್ಬದಂತೆ ಅಚರಿಸಲು ನಿರ್ಧರಿಸಿದ್ದೇವೆ.ಮೇ 10 ರಿಂದ ಮೇ 20 ರವರೆಗೆ ಸರ್ವರ ಮನೋರಂಜನೆಗಾಗಿ ಜಾಯಿಂಟ್ ವಿಲ್, ಮೋಜು ಮಸ್ತಿಗಳು,ಆಟಿಕೆಗಳು, ಆಟೋಟ ಪರಿಕರಗಳು,ಬೃಹತ್ತ್ ವಸ್ತು ಪ್ರದರ್ಶನ ಮಾರಾಟ ಮಳಿಗೆಗಳು ಮನರಂಜಿಸಲಿವೆ.
ಮೇ 14 ರಂದು ಮಹಾರುದ್ರಾ ಯಾಗ ಪೂರ್ವ ಭಾವಿಯಾಗಿ ಮಲ್ಪೆ ಯಿಂದ ಕೊಡವೂರು ಮಹತೋಭಾರ ಶಂಕರನಾರಯಣ ದೇವಸ್ಥಾನದವರೆಗೆ ಭವ್ಯ ಹೊರೆಕಾಣಿಕೆ ಮೆರವಣಿಗೆ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿರುವುದು.
ಮೇ 15 ರಂದು ಮಹಾ ರುದ್ರ ಯಾಗ, ಗಣ ಯಾಗ ಧಾರ್ಮಿಕ ವಿಧಿವಿಧಾನಗಳು ಅರಂಭಗೊಳ್ಳಲಿರುವುದು .ಅದೇ ಸಂಜೆ ಧಾರ್ಮಿಕ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.
ಮೇ .16 ರಂದು ಸರ್ವರಿಗೂ ಆರೋಗ್ಯ ಭಾಗ್ಯದ ಪರಿಕಲ್ಪನೆಯಲ್ಲಿ ಉಚಿತ ಆರೋಗ್ಯ ಶಿಬಿರ ಹಮ್ಮಿ ಕೊಳ್ಳಲಾಗಿದ್ದು ಇದರ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಡೆದುಕೊಳ್ಳುವಂತೆ ಮನವಿ ಮಾಡಿಕೊಳ್ಳುತ್ತಿದ್ದೇವೆ.
ಮೇ 17 ರಂದು ಮಲ್ಪೆ ಬೀಚ್ ನಲ್ಲಿ ವಿವಿಧ ಸಂಪ್ರದಾಯಿಕ ಕ್ರೀಡಾಕೂಟ ಸ್ಪರ್ಧೆಗಳು ನಡೆಯಲಿದೆ .ಅಂದು ಸಂಜೆ 6 ಗಂಟೆಗೆ ಮಲ್ಪೆ ಕಡಲ ತೀರದಲ್ಲಿ ವಾರಣಾಸಿಯ ಪುರೋಹಿತರಿಂದ ಗಂಗಾರತಿ ಯನ್ನು ನೋಡಿ ಪುನೀತರಾಗುವ ಭಾಗ್ಯ ಭಕ್ತ ಜನತೆಗೆ ಲಭಿಸಲಿದೆ. ಈ ಕಾರ್ಯಕ್ರಮಕ್ಕೆ ನಾಡಿನ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಭಾಗವಹಿಸಲಿದ್ದಾರೆ.
ರಾತ್ರಿ 8:00ಗೆ ದಕ್ಷಿಣ ಭಾರತದ ಪ್ರಖ್ಯಾತ ಕಲಾವಿದೆ ಮಂಗ್ಲಿ ಅವರು ತಮ್ಮ ಅದ್ಭುತ ಶಿವಗಾನಮೃತದಿಂದ ಕಲಾಭಿಮಾನಿಗಳ ಗಳನ್ನು, ಭಕ್ತ ಜನತೆಯನ್ನು ಭಕ್ತಿ ಸಾಗರದಲ್ಲಿ ಪುನೀತಗೊಳಿಸಲಿದ್ದಾರೆ….
ಮೇ 18 ರಂದು ನಡೆಯಲಿರುವ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ದೇಶದ ಮೂಲೆ ಮೂಲೆಗಳಿಂದ ವಿವಿಧ ಸಂಸ್ಥೆಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು,ನಾಡಿನ ಯುವ ಉದ್ಯೋಗಕಾಂಕ್ಷಿಗಳು ಭಾಗವಹಿಸುವಂತೆ ಮನವಿ ಮಾಡುತ್ತಿದ್ದೇವೆ.
ಮೇ 19 ರಂದು ಮಹಾ ರುದ್ರ ಯಾಗ ಕೊನೆಯ ದಿನದಂದು ಪೂರ್ಣಾಹುತಿ. ನಡೆಯಲಿದೆ
ಇನ್ನೂ ವಿಶೇಷವಾಗಿ ಸ್ಥಳೀಯ ಕಲಾವಿದರುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ,ವಸ್ತು ಪ್ರದರ್ಶನ ನಡೆಯುವ ವೇದಿಕೆಯಲ್ಲಿ “ಪ್ರತಿಭೆ ನಿಮ್ಮದು ವೇದಿಕೆ ನಮ್ಮದು” ಎನ್ನುವ ಕಾರ್ಯಕ್ರಮ ಅಯೋಜಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸ ಬಹುದಾಗಿದೆ.ಕಾರ್ಯಕ್ರಮ ಪ್ರತಿದಿನ 5 ರಿಂದ 8 ರವರೆಗೆ ನಡೆಯಲಿದೆ.ಅಸಕ್ತರು ಮಹಾ ರುದ್ರ ಯಾಗ ಸಮಿತಿ ಕಚೇರಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ಈ ಐದು ದಿನಗಳ ಕಾಲ ಮಹಾರುದ್ರ ಯಾಗ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ,ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಾಡಿನ ಪ್ರಖ್ಯಾತ ಕಲಾವಿದರುಗಳಿಂದ ಪ್ರತಿ ನಿತ್ಯ ನಡೆಯಲಿದೆ.
ಅಷ್ಟೇ ಅಲ್ಲದೇ ಪರಮ ಶಿವನ ಮಹಾ ಯಾಗದ ಪುಣ್ಯೋದಯಕ್ಕೆ ಅಗಮಿಸುವ ಭಕ್ತರಿಗೆ ಪ್ರತಿದಿನ ಅನ್ನ ಪ್ರಸಾದದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.
ವಿಶೇಷ ವಾಗಿ ಐದು ಸಾವಿರ ಮಹಿಳೆಯರಿಗೆ ಮಹಾ ರುದ್ರ ಯಾಗ ಸಂಕಲ್ಪದೊಂದಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಅಸಕ್ತರು ಮಹಾ ರುದ್ರ ಯಾಗ ಸಮಿತಿ ಕಚೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಅವರು ಹೇಳಿದರು.
