ಬಂಟ್ವಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ; ಓರ್ವ ಆರೋಪಿ ಬಂಧನ

Spread the love

ಬಂಟ್ವಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ; ಓರ್ವ ಆರೋಪಿ ಬಂಧನ

ಬಂಟ್ವಾಳ: ಹಾಸನದಿಂದ ಮಂಗಳೂರಿಗೆ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 538.63 ಗ್ರಾಂ MDMA, 99.12 ಗ್ರಾಂ ಕೊಕೈನ್ ಸೇರಿದಂತೆ ಒಟ್ಟು ₹1,05,59,450 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆಗಸ್ಟ್ 15ರಂದು ರಾತ್ರಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಟಿ. ಅವರಿಗೆ ಹಾಸನ ಕಡೆಯಿಂದ ಮಂಗಳೂರು ಕಡೆಗೆ ಮಾದಕವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು.

ಮಾಹಿತಿ ಆಧರಿಸಿ ಪೊಲೀಸರು ಸಿಬ್ಬಂದಿಯೊಂದಿಗೆ ತಡರಾತ್ರಿ KA-01-MA-1284 ನೋಂದಣಿಯ ಕಾರನ್ನು ತಡೆದು ಪರಿಶೀಲನೆ ನಡೆಸಿದರು. ಕಾರು ಚಾಲಕನಾಗಿದ್ದ ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ (35) ಎಂಬಾತನನ್ನು ವಿಚಾರಣೆ ನಡೆಸಿದಾಗ, ಕಾರಿನಲ್ಲಿ ಮಾದಕವಸ್ತು ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಬಳಿಕ ಕಾರನ್ನು ಪರಿಶೀಲಿಸಿದಾಗ 538.63 ಗ್ರಾಂ MDMA ಹಾಗೂ 99.12 ಗ್ರಾಂ ಕೊಕೈನ್, ಖಾಲಿ ಪ್ಲಾಸ್ಟಿಕ್ ಡಬ್ಬಿಗಳು, ಡಿಜಿಟಲ್ ತೂಕದ ಯಂತ್ರ ಸೇರಿದಂತೆ ಇತರ ಸೊತ್ತುಗಳು ಪತ್ತೆಯಾಗಿವೆ.

ವಶಪಡಿಸಿಕೊಂಡ MDMAಯ ಅಂದಾಜು ಮೌಲ್ಯ ₹53,86,300 ಹಾಗೂ ಕೊಕೈನ್‌ನ ಮೌಲ್ಯ ₹49,56,000 ಎಂದು ಅಂದಾಜಿಸಲಾಗಿದೆ. ಇತರ ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ಸೇರಿದಂತೆ ಒಟ್ಟು ₹1,05,59,450 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಸದ್ರಿ ಕಾರ್ಯಾಚರಣೆಯಲ್ಲಿ ಬಂಟ್ವಾಳ ಉಪವಿಭಾಗಾಧೀಕ್ಷಕರಾದ ಯಶ್ ಕುಮಾರ್ ಶರ್ಮ ಐಪಿಎಸ್ ರವರ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಪ್ರಭಾರ ಪಿ ಐ ಅನಂತ ಪದ್ಮನಾಭ ಮಾರ್ಗದರ್ಶನದಲ್ಲಿ, ಬಂಟ್ವಾಳ ಗ್ರಾಮಾಂತರ ಪಿ.ಎಸ್.ಐ ಮಂಜುನಾಥ್ ಟಿ ರವರ ನೇತೃತ್ವದಲ್ಲಿ, CPC ಅಶೋಕ್, CPC ರಾಘವೇಂದ್ರ, CHC ಪ್ರಶಾಂತ್, CHC ಲೋಕೇಶ್, CHC ಶ್ರೀಧರ್, CHC ನಜಿರ್, CPC ವಿವೇಕ್, CPC ಕುಮಾರ್ ಹಾಗೂ CPC ಉದಯ್ ರವುಗಳನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿರುತ್ತದೆ.


Spread the love
Subscribe
Notify of

0 Comments