Home Mangalorean News Kannada News ದಕ್ಷಿಣ ಕನ್ನಡ ಅಬಕಾರಿ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ : ₹20.37 ಲಕ್ಷ ಮೌಲ್ಯದ ಗೋವಾ...

ದಕ್ಷಿಣ ಕನ್ನಡ ಅಬಕಾರಿ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ : ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳು ವಶ

Spread the love

ದಕ್ಷಿಣ ಕನ್ನಡ ಅಬಕಾರಿ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ : ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳು ವಶ

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳು ವಶ

ಒಟ್ಟು 1,450.340 ಲೀಟರ್ ಮದ್ಯ ಜಪ್ತಿ – ಅಕ್ರಮ ಮದ್ಯ ದಾಸ್ತಾನು ಮತ್ತು ಸಾಗಾಟದ ವಿರುದ್ಧ ಕಾರ್ಯಾಚರಣೆ; ಹೆಜಮಾಡಿ ಪ್ರಕರಣದ ಬೆನ್ನಲ್ಲೇ ಮತ್ತೊಂದು ಯಶಸ್ವಿ ಕಾರ್ಯಾಚರಣೆ

ಮಂಗಳೂರು/ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಅಬಕಾರಿ ಇಲಾಖೆ ಅಧಿಕಾರಿಗಳು ದಿನಾಂಕ 23.11.2026ರಂದು ಎರಡು ಪ್ರತ್ಯೇಕ ಕಾರ್ಯಾಚರಣೆಗಳನ್ನು ನಡೆಸಿ, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಹಾಗೂ ಸಾಗಾಟ ಮಾಡುತ್ತಿದ್ದ ಗೋವಾ ರಾಜ್ಯದ ಒಟ್ಟು 1,450.340 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಎರಡು ಪ್ರಕರಣಗಳಲ್ಲಿ ಜಪ್ತಿ ಮಾಡಲಾದ ಮದ್ಯ ಹಾಗೂ ವಾಹನಗಳ ಅಂದಾಜು ಒಟ್ಟು ಮೌಲ್ಯ ₹20,37,340 ಆಗಿರುತ್ತದೆ.

ಮೊದಲ ಪ್ರಕರಣ: ಬಾಳ್ತಿಲದಲ್ಲಿ ₹7.72 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಪೂರ್ಲಿಪಾಡಿ ಎಂಬಲ್ಲಿ ಅಮಿತ್ ಬಿನ್ ಅಣ್ಣು ಪೂಜಾರಿ ಅವರಿಗೆ ಸೇರಿದ ಜಾಗದಲ್ಲಿ ಸಂಪ್ರಿತ್ ಕಾಸರಗೋಡು ಎಂಬ ವ್ಯಕ್ತಿಯು ಸೇರಿಕೊಂಡು ಗೋವಾ ರಾಜ್ಯದಲ್ಲಿ ತಯಾರಿಸಲಾದ ಮದ್ಯವನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಲಭಿಸಿತ್ತು.

ಶ್ರೀ ಸಿ. ಜಗದೀಶ್, ಮಾನ್ಯ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ (ಜಾ & ತ), ಮಂಗಳೂರು ಇವರ ನಿರ್ದೇಶನದ ಮೇರೆಗೆ ಹಾಗೂ ಶ್ರೀಮತಿ ಬಿಂದುಶ್ರೀ ಪಿ., ಮಾನ್ಯ ಅಬಕಾರಿ ಉಪ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಮಾರ್ಗದರ್ಶನದಲ್ಲಿ, ಶ್ರೀ ಸಂತೋಷ್ ಮೊಡಗಿ, ಅಬಕಾರಿ ಉಪ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗ ಮತ್ತು ಶ್ರೀಮತಿ ಗಾಯತ್ರಿ ಸಿ.ಎಚ್., ಅಬಕಾರಿ ಉಪ ಅಧೀಕ್ಷಕರು, ಮಂಗಳೂರು ಉಪ ವಿಭಾಗ ಇವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಬಂಟ್ವಾಳ ವಲಯದ ಅಬಕಾರಿ ನಿರೀಕ್ಷಕರಾದ ಶ್ರೀ ಲಕ್ಷ್ಮಣ್ ಶಿವಣಗಿ ನೇತೃತ್ವದಲ್ಲಿ ಅಬಕಾರಿ ಉಪನಿರೀಕ್ಷಕರಾದ ಶ್ರೀ ಅಭಿಷೇಕ್ ಬೋರಕರ ಹಾಗೂ ಶ್ರೀ ವಿಶಾಲ್ ನಾಯಕ್, ಅಬಕಾರಿ ಪೇದೆಗಳಾದ ಶ್ರೀ ಪ್ರಕಾಶ್ ಮತ್ತು ಶ್ರೀ ದೊಡ್ಡಪ್ಪ ಹಾಗೂ ವಾಹನ ಚಾಲಕ ಶ್ರೀ ಧೀರಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ದಾಳಿಯ ಸಂದರ್ಭದಲ್ಲಿ 180 ಮಿಲಿ ಸಾಮರ್ಥ್ಯದ ರಾಯಲ್ ಬ್ಲೂ ಮಾಲ್ಟ್ ವಿಸ್ಕಿಯ 146 ಪೆಟ್ಟಿಗೆಗಳಲ್ಲಿ ಒಟ್ಟು 1,261.440 ಲೀಟರ್ ಗೋವಾ ಮದ್ಯ ಪತ್ತೆಯಾಗಿದ್ದು, ಅಂದಾಜು ₹7,72,340 ಮೌಲ್ಯದ ಮದ್ಯವನ್ನು ಜಪ್ತಿ ಮಾಡಲಾಗಿದೆ.

ಎರಡನೇ ಪ್ರಕರಣ: ಎರಡು ಕಾರುಗಳಲ್ಲಿ 188.9 ಲೀಟರ್ ಗೋವಾ ಮದ್ಯ ಅಕ್ರಮ ಸಾಗಾಟ

ಬಂಟ್ವಾಳ ತಾಲೂಕಿನ ಮೆಲ್ಕಾರ್ ಪ್ರದೇಶದ ಕಲ್ಲಡ್ಕದ ಸಮೀಪ ಕೇರಳ ರಾಜ್ಯದ ನೋಂದಣಿ ಹೊಂದಿರುವ ಎರಡು ಕಾರುಗಳಲ್ಲಿ ಯಾವುದೇ ಪರವಾನಗಿ ಅಥವಾ ಅಧಿಕೃತ ದಾಖಲೆಗಳಿಲ್ಲದೆ ಗೋವಾ ರಾಜ್ಯದ ಮದ್ಯವನ್ನು ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಅಬಕಾರಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭಿಸಿತ್ತು.

ಈ ಮಾಹಿತಿಯ ಮೇರೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪರಿಶೀಲಿಸಿದಾಗ, ಕೇರಳ ರಾಜ್ಯದ ನೋಂದಣಿ ಹೊಂದಿರುವ ಬಿಳಿ ಮತ್ತು ಕಪ್ಪು ಬಣ್ಣದ ಹುಂಡೈ i20 ಕಾರು (KL-56-R-2927) ಹಾಗೂ ಬಿಳಿ ಬಣ್ಣದ ಮಾರುತಿ ಸುಜುಕಿ ಸ್ವಿಫ್ಟ್ VDI ಕಾರು (KL-14-H-7061)ಗಳಲ್ಲಿ ಆರೋಪಿಗಳಾದ ಚಂದ್ರಶೇಖರ್ (ಅನ್ನು), ಸಫ್ವಾನ್ ಎಂ. ಹಾಗೂ ಮಹಮ್ಮದ್ ಶಾಫಿನ್ ಇವರುಗಳು 24 ಪೆಟ್ಟಿಗೆಗಳಲ್ಲಿ 180 ಮಿಲಿ ಸಾಮರ್ಥ್ಯದ ರಾಯಲ್ ಬ್ಲೂ ಮದ್ಯವನ್ನು, ಒಟ್ಟು 188.9 ಲೀಟರ್ ಪ್ರಮಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಈ ಕಾರ್ಯಾಚರಣೆಯಲ್ಲಿ ಮದ್ಯದೊಂದಿಗೆ ಸಾಗಾಟಕ್ಕೆ ಬಳಸಿದ ಎರಡೂ ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಮದ್ಯ ಹಾಗೂ ವಾಹನಗಳ ಅಂದಾಜು ಒಟ್ಟು ಮೌಲ್ಯ ₹12,65,000 ಆಗಿರುತ್ತದೆ.

ಆರೋಪಿತರ ಕೃತ್ಯವು ಕರ್ನಾಟಕ ಅಬಕಾರಿ ಕಾಯ್ದೆ, 1965ರ ಕಲಂ 11, 14, 15, 38(ಎ), 40ರ ಉಲ್ಲಂಘನೆಯಾಗಿದ್ದು, ಕಲಂ 32ರ ಅಡಿಯಲ್ಲಿ ಪರ್ಕರಣ ದಾಖಲು ಮಾಡಿಕೊಂಡಿದ್ದಾರೆ.

ಹೆಜಮಾಡಿ ಟೋಲ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಯಶಸ್ವಿ ಕಾರ್ಯಾಚರಣೆ

ಈ ಹಿಂದೆ ಮಾನ್ಯ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಮಾನ್ಯ ಅಬಕಾರಿ ಉಪ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲೆ ಇವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ರಚಿಸಲಾದ ಇದೇ ಅಬಕಾರಿ ತಂಡವು ಹೆಜಮಾಡಿ ಟೋಲ್ ಬಳಿ ಗೋವಾ ರಾಜ್ಯದ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸುವಲ್ಲಿ ಯಶಸ್ವಿಯಾಗಿತ್ತು.

ಸದರಿ ಪ್ರಕರಣದ ತನಿಖೆಯನ್ನು ನಿರಂತರವಾಗಿ ಮುಂದುವರಿಸಿ, ಲಭ್ಯ ಮಾಹಿತಿಗಳ ಆಧಾರದ ಮೇಲೆ ಚಾಣಾಕ್ಷತನದಿಂದ ಹಾಗೂ ಸಿನಿಮಾ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಪ್ರಕರಣದ ಜಾಲವನ್ನು ಪತ್ತೆಹಚ್ಚುವಲ್ಲಿ ತಂಡ ಯಶಸ್ವಿಯಾಗಿದೆ. ಈ ಮೂಲಕ ಅಕ್ರಮ ಮದ್ಯ ಸಾಗಾಟ ಮತ್ತು ದಾಸ್ತಾನು ಜಾಲದ ವಿರುದ್ಧ ತಂಡವು ನಿರಂತರ ನಿಗಾ ಹಾಗೂ ಪರಿಣಾಮಕಾರಿ ಕಾರ್ಯಾಚರಣೆ ನಡೆಸುತ್ತಿರುವುದು ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರವಾಗಿದೆ.

ಈ ಎರಡೂ ಕಾರ್ಯಾಚರಣೆಗಳಲ್ಲಿ ಅಬಕಾರಿ ಉಪ ಅಧೀಕ್ಷಕರು, ಮಂಗಳೂರು ಉಪ ವಿಭಾಗ ಹಾಗೂ ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು, ಬಂಟ್ವಾಳ ವಲಯದ ಅಬಕಾರಿ ನಿರೀಕ್ಷಕರು, ಉಪನಿರೀಕ್ಷಕರು ಹಾಗೂ ಬೆಳ್ತಂಗಡಿ ವಲಯದ ಅಬಕಾರಿ ಅಧಿಕಾರಿಗಳು ಭಾಗವಹಿಸಿ ಕಾರ್ಯಾಚರಣೆಗೆ ಸಹಕರಿಸಿದ್ದಾರೆ.

ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯವನ್ನು ತಂದು ದಾಸ್ತಾನು ಮಾಡುವುದು ಹಾಗೂ ಇತರ ರಾಜ್ಯಗಳಿಗೆ ಸಾಗಾಟ ಮಾಡುವ ಅಕ್ರಮ ಚಟುವಟಿಕೆಗಳ ವಿರುದ್ಧ ದಕ್ಷಿಣ ಕನ್ನಡ ಅಬಕಾರಿ ಇಲಾಖೆ ನಿರಂತರ ನಿಗಾ ವಹಿಸಿದ್ದು, ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಇಲಾಖೆ ತಿಳಿಸಿದೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version