Home Mangalorean News Kannada News ಮಲ್ಪೆ: ಪ್ರವಾಸಿಗರನ್ನು ವಿಹಾರಕ್ಕೆ ಕರೆದೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದು ಹಲವು ಪ್ರವಾಸಿಗರು ಅಸ್ವಸ್ಥ

ಮಲ್ಪೆ: ಪ್ರವಾಸಿಗರನ್ನು ವಿಹಾರಕ್ಕೆ ಕರೆದೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದು ಹಲವು ಪ್ರವಾಸಿಗರು ಅಸ್ವಸ್ಥ

Spread the love

ಮಲ್ಪೆ: ಪ್ರವಾಸಿಗರನ್ನು ವಿಹಾರಕ್ಕೆ ಕರೆದೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದು ಹಲವು ಪ್ರವಾಸಿಗರು ಅಸ್ವಸ್ಥ

ಮಲ್ಪೆ: ಪ್ರವಾಸಿಗರನ್ನು ವಿಹಾರಕ್ಕೆ ಕರೆದೊಯ್ಯುತ್ತಿದ್ದ ದೋಣಿಯೊಂದು ಸಮುದ್ರದಲ್ಲಿ ಮಗುಚಿದ ಪರಿಣಾಮ ಇಬ್ಬರು ಗಂಭೀರ ಸೇರಿದಂತೆ ಹಲವು ಮಂದಿ ಅಸ್ವಸ್ಥಗೊಂಡ ಘಟನೆ ಸೋಮವಾರ ಬೆಳಗ್ಗೆ ಕೋಡಿಬೆಂಗ್ರೆ ಬೀಚ್ ಸಮೀಪ ನಡೆದಿದೆ.

ಸ್ಥಳೀಯ ರೆಸಾರ್ಟ್ನಲ್ಲಿ ಉಳಿದಿದ್ದ ಪ್ರವಾಸಿಗರನ್ನು ವಿಹಾರಕ್ಕೆಂದು ದೋಣಿಯಲ್ಲಿ ಸಮುದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಇದರಲ್ಲಿ ಸುಮಾರು 10 ಮಂದಿ ಪ್ರವಾಸಿಗರಿದ್ದು, ಇವರು ಯಾರು ಕೂಡ ಲೈಫ್ ಜಾಕೆಟ್ ಧರಿಸಿಲ್ಲ ಎಂದು ತಿಳಿದುಬಂದಿದೆ.

ನೀರಿನಲ್ಲಿ ಸಾಗುತ್ತಿದ್ದ ವೇಳೆ ದೋಣಿ ಅಕಸ್ಮಿಕವಾಗಿ ಪಲ್ಟಿಯಾಗಿದ್ದು, ಎಲ್ಲ ಪ್ರವಾಸಿಗರು ನೀರಿಗೆ ಬಿದ್ದರೆಂದು ತಿಳಿದುಬಂದಿದೆ. ಇದರಲ್ಲಿ ಹಲವು ಮಂದಿಯನ್ನು ರಕ್ಷಿಸಲಾಗಿದೆ. ಆದರೆ ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಇಬ್ಬರು ಗಂಭೀರ ಸ್ಥಿತಿಯಲ್ಲಿ ಖಾಸಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸ್ಥಳಕ್ಕೆ ಮಲ್ಪೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.


Spread the love

Exit mobile version