ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ, 180 ಗ್ರಾಂ ಗಾಂಜಾ ವಶಕ್ಕೆ
ಬಂಟ್ವಾಳ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 180 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಫೆಬ್ರವರಿ 19ರಂದು ಮಧ್ಯಾಹ್ನ ಬಂಟ್ವಾಳ ತಾಲೂಕಿನ ಕೊಡ್ಮಾಣು ಗ್ರಾಮದ ಪಕ್ಕಳಪಾದೆ ಎಂಬಲ್ಲಿ ರಸ್ತೆಯ ಬದಿಯ ನಿರ್ಜನ ಸ್ಥಳದಲ್ಲಿ ಒಬ್ಬ ವ್ಯಕ್ತಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ಅಕ್ರಮವಾಗಿ ವಶದಲ್ಲಿಟ್ಟುಕೊಂಡಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಮಂಜುನಾಥ ಟಿ., ಪೊಲೀಸ್ ಉಪ ನಿರೀಕ್ಷಕರು (ಕಾ&ಸು), ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ, ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು.
ಸ್ಥಳದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಆತನು ಬಂಟ್ವಾಳ ಮೇರಮಜಲು ನಿವಾಸಿ ಪ್ರಶಾಂತ್ @ ಪ್ರಸಾದ್ (30) ಎಂದು ತಿಳಿದುಬಂದಿದೆ. ತಪಾಸಣೆ ವೇಳೆ ಆತನ ಬಳಿಯಿಂದ 180 ಗ್ರಾಂ ಗಾಂಜಾ ಪತ್ತೆಯಾಗಿದೆ.
ಪ್ರಾಥಮಿಕ ವಿಚಾರಣೆಯಲ್ಲಿ, ಬಂಟ್ವಾಳದ ಪಲ್ಲಮಜಲು ನಿವಾಸಿ ಅಬ್ದುಲ್ ರಜಾಕ್ ಎಂಬವರು ಗಾಂಜಾವನ್ನು ಗಿರಾಕಿಗಳಿಗೆ ಮಾರಾಟ ಮಾಡುವಂತೆ ನೀಡಿದ್ದಾಗಿ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿತನನ್ನು ಗಾಂಜಾ ಹಾಗೂ ಆತನ ಬಳಿಯಿದ್ದ ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 19/2026ರಂತೆ 8(C) r/w 20(b)(ii)(A) NDPS ಕಾಯ್ದೆ 1985ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
