ಮಂಗಳೂರು ವಿವಿ 44ನೇ ಘಟಿಕೋತ್ಸವ: ಹರೇಕಳ ಹಾಜಬ್ಬ, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಪ್ರದಾನ

Spread the love

ಮಂಗಳೂರು ವಿವಿ 44ನೇ ಘಟಿಕೋತ್ಸವ: ಹರೇಕಳ ಹಾಜಬ್ಬ, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಪ್ರದಾನ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿಂದು ಜರುಗಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ದೈವ ನರ್ತಕ ರವೀಶ್ ಪಡುಮಲೆಯವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ) ಅವರಿಗೆ ಘೋಷಣೆಯಾಗಿರುವ ಗೌರವ ಡಾಕ್ಟರೇಟ್ ಅನ್ನು ಎಪ್ರಿಲ್ 13ರಂದು ಅವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.

ಎಲ್ಲ ಪದವೀಧರ ವಿದ್ಯಾರ್ಥಿಗಳಿಗೆ ರಾಜ್ಯಪಾಲರು ಪದವಿ ಪ್ರದಾನ ಮಾಡಿದರು. ಸಂಸದ ಕ್ಯಾ.ಬ್ರಿಜೇಶ್ ಚೌಟ ಘಟಿಕೋತ್ಸವ ಭಾಷಣ ಮಾಡಿದರು.

ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಕುಲಸಚಿವ ಪ್ರೊ.ದೇವೇಂದ್ರಪ್ಪ (ಪರೀಕ್ಷಾಂಗ )ಗಣೇಶ್ ಸಂಜೀವ (ಪ್ರಭಾರ), ಹಣಕಾಸು ಅಧಿಕಾರಿ ಡಾ.ವೈ.ಸಂಗಪ್ಪ ಮೊದಲಾದವರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments