Home Mangalorean News Kannada News ಮಂಗಳೂರು: ತೊಕ್ಕೊಟ್ಟು ಬಳಿ ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಕೊಲೆ

ಮಂಗಳೂರು: ತೊಕ್ಕೊಟ್ಟು ಬಳಿ ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಕೊಲೆ

Spread the love

ಮಂಗಳೂರು: ತೊಕ್ಕೊಟ್ಟು ಬಳಿ ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಕೊಲೆ

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಭಾಗದಲ್ಲಿ ಶುಕ್ರವಾರ ಬೆಳಿಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಮುಳ್ಳುಗುಡ್ಡೆ ಹೌಸ್, ತಲಪಾಡಿ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯಿಂದ ರಸ್ತೆಗೆ ಬಿದ್ದ ತಕ್ಷಣವೇ, ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ. ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಅಪರಾಧ ಪ್ರಕರಣಗಳಲ್ಲಿ ತೊಡಗಿಸಿ ಕೊಂಡಿದ್ದ ಆರಿಫ್ ನನ್ನು ವೈಯಕ್ತಿಕ ದ್ವೇಷ ದಿಂದ ಹತ್ಯೆ ಗೈದಿರುವ ಶಂಕೆ ವ್ಯಕ್ತ ಪಡಿಸಿದ್ದಾರೆ. ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲ ಯಾವುದೇ ಪ್ರಕರಣಗಳಿರಲಿಲ್ಲ. ಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.


Spread the love

Exit mobile version