ಮಂಗಳೂರು: ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿ ಬಂಧನ 

Spread the love

ಮಂಗಳೂರು: ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿ ಬಂಧನ 

ಮಂಗಳೂರು: ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (LPC) ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ನ.24ರಂದು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ ಜಿಮ್ಮಿ ಅಲಿಯಾಸ್ ಜಿಂಕೆ ಜಿಮ್ಮಿ ಅಲಿಯಾಸ್ ಪೈಜಲ್ ಅಲಿಯಾಸ್ ಮಹಮ್ಮದ್ ಪೈಜಲ್ ಎಂದು ಗುರುತಿಸಲಾಗಿದೆ.

ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಅಪರಾಧ ಕ್ರಮಾಂಕ 235/2016ರ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಕಲಂ 457, 380 ಹಾಗೂ 34ರ ಅಡಿಯಲ್ಲಿ ಆರೋಪಿಯಾಗಿದ್ದ ಈತ, ನ್ಯಾಯಾಲಯದ ಸಿ.ಸಿ. ಸಂಖ್ಯೆ 191/2021ರ ವಿಚಾರಣೆಗೆ ಸುಮಾರು ಐದು ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ 2026ರಲ್ಲಿ ನ್ಯಾಯಾಲಯವು ಪ್ರಕರಣವನ್ನು ಎಲ್‌ಪಿಸಿ (LPC – Long Pending Case) ಪ್ರಕರಣವೆಂದು ಪರಿಗಣಿಸಿತ್ತು.

ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ನ.24ರಂದು ಆರೋಪಿಯನ್ನು ಪತ್ತೆಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.


Spread the love
Subscribe
Notify of

0 Comments