ಮಂಗಳೂರು: ಕಾಣೆಯಾದ ಬಾಲಕಿ ಪತ್ತೆಗೆ ಮನವಿ
ಮಂಗಳೂರು: ನಗರದ ಕೊಟ್ಟಾರ ಚೌಕಿ ಶ್ರೀ ಸಾಯಿ ನಿವಾಸದಲ್ಲಿದ್ದ ಶಾಂತಲಾ (45), ಮಗಳಾದ ನಿಶಿತಾ (12) ಅಕ್ಟೋಬರ್ 1 ರಂದು ಮನೆಯಿಂದ ಹೋದವರು ಈವರೆಗೂ ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಪ್ರಕರಣ ಕಾವೂರು ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.
ಕಾಣೆಯಾದವರ ಚಹರೆ: ಎತ್ತರ ಸುಮಾರು 5 ಅಡಿ, 5 ಇಂಚು, ಗೋಧಿ ಮೈ ಬಣ್ಣ, ಉದ್ದನೆಯ ಕಪ್ಪು ಕೂದಲು, ದುಂಡು ಮುಖ ಹೊಂದಿರುತ್ತಾರೆ. ಕನ್ನಡ, ತುಳು, ಇಂಗ್ಲೀಷ್, ಹಿಂದಿ ಮಾತನಾಡುತ್ತಾರೆ. ಕಾಣೆಯಾದ ದಿನ ಕೆಂಪು ಹಳದಿ ನೀಲಿ ಮಿಶ್ರಿತ ಚೂಡಿದಾರ ಟಾಪ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಕಾವೂರು ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
