ಮಂಗಳೂರು : ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Spread the love

ಮಂಗಳೂರು : ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ.

ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಮಹಮ್ಮದ್ ಎಂಬವರ ಪುತ್ರ ಇರ್ಫಾನ್ (36) ಅವರ ಮೃತದೇಹ ಎಂದು ತಿಳಿದು ಬಂದಿದೆ.

ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ಮಾಡುತ್ತಿದ್ದ ವೇಳೆ ಮೃತದೇಹ ನದಿಯಲ್ಲಿ ಕಂಡು ಬಂದಿದ್ದು, ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಂಟ್ವಾಳ ಪೊಲೀಸರು ಹಾಗೂ ಗೂಡಿನಬಳಿಯ ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ಕಾರಣಕ್ಕಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದ ಶೀತಲೀಕರಣದಲ್ಲಿ ಇಡಲಾಗಿತ್ತು.

ಸಂಜೆ ವೇಳೆ ಮೃತದೇಹದ ಗುರುತು ಪತ್ತೆಯಾಗಿದ್ದು ಗೂಡಿನಬಳಿ ನಿವಾಸಿ ಇರ್ಫಾನ್ ಎಂದು ಹೇಳಲಾಗಿದೆ. ಸೌದಿ ಅರೇಬಿಯಾ ದಲ್ಲಿ ಉದ್ಯೋಗದಲ್ಲಿದ್ದ ಈತ ಮೂರು ವರ್ಷಗಳ ಹಿಂದೆಯಷ್ಟೆ ಊರಿಗೆ ಮರಳಿ ಬಳಿಕ ರಿಕ್ಷಾ ಖರೀದಿಸಿ ಅದರಲ್ಲಿ ದುಡಿಯುತ್ತಿದ್ದರು ಎಂದು ತಿಳಿದುಬಂದಿದ್ದು, ವಿವಾಹಿತನಾಗಿರುವ ಈತನಿಗೆ ಮೂವರು ಮಕ್ಕಳಿದ್ದಾರೆ. ಆದರೆ ಮೂರು ದಿನಗಳಿಂದ ಕಾಣೆಯಾಗಿದ್ದ ಎಂದು ಹೇಳಲಾಗಿದ್ದು, ಇಂದು ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

ಮೃತ ದೇಹದ ಕೈ ಗಳಲ್ಲಿ ಗಾಯಗಳಿರುವುದರಿಂದ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ನ್ಯಾಯ ಒದಗಿಸಿಕೊಡುವಂತೆ ಕುಟುಂಬ ಮೂಲಗಳು ಪಟ್ಟು ಹಿಡಿದಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments