Home Mangalorean News Kannada News ಮಂಗಳೂರು: ಅಪ್ರಾಪ್ತ ಜೋಡಿಗೆ ಹಲ್ಲೆ ನಡೆಸಿ ಜಾತಿನಿಂದನೆ : ಇಬ್ಬರ ವಿರುದ್ದ ಪ್ರಕರಣ ದಾಖಲು

ಮಂಗಳೂರು: ಅಪ್ರಾಪ್ತ ಜೋಡಿಗೆ ಹಲ್ಲೆ ನಡೆಸಿ ಜಾತಿನಿಂದನೆ : ಇಬ್ಬರ ವಿರುದ್ದ ಪ್ರಕರಣ ದಾಖಲು

Spread the love

ಮಂಗಳೂರು: ಅಪ್ರಾಪ್ತ ಜೋಡಿಗೆ ಹಲ್ಲೆ ನಡೆಸಿ ಜಾತಿನಿಂದನೆ : ಇಬ್ಬರ ವಿರುದ್ದ ಪ್ರಕರಣ ದಾಖಲು

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ತನ್ನ ಸ್ನೇಹಿತೆಯೊಂದಿಗೆ ರೈಲ್ವೇ ಟ್ರ್ಯಾಕ್ ನಲ್ಲಿ ಕುಳಿತು ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿ ವೀಡಿಯೋ ಮಾಡಿ ವೈರಲ್ ಮಾಡಿರುವ ಕುರಿತು ಪ್ರಕರಣ ದಾಖಲಾಗಿದೆ.

ನಗರದ ಬಾಬುಗುಡ್ಡೆ ಗ್ರಾಮ ಸಂಘದ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ಬಾಲಕ ಮತ್ತು ಆತನ ಸ್ನೇಹಿತೆ ಜೊತೆಯಲ್ಲಿ ಕುಳಿತು ಮಾತನಾಡುತ್ತಿದ್ದ ವೇಳೆ ಸ್ವೀವನ್ ಮೊಂತೆರೋ ಎಂಬಾತ ತನ್ನ ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ವೀಡಿಯೋ ಮಾಡುತ್ತಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಬಾಲಕನಿಗೆ ಸ್ಟೀವನ್ ಪುತ್ರ ಅವಿಲ್ ಎಂಬಾತ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುತ್ತಾರೆ. ಅಲ್ಲದೆ ಸಾರ್ವಜನಿಕವಾಗಿ ಬೆದರಿಕೆ ಹಾಕಿದ್ದು ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುತ್ತಾರೆ.

ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಸ್ವೀವನ್ ಮೊಂತೆರೋ ಮತ್ತು ಆತನ ಪುತ್ರ ಆವಿಲ್ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.


Spread the love

Exit mobile version