ಮಂಗಳೂರು | ಲೈಂಗಿಕ ಕಿರುಕುಳ ಆರೋಪ: ಚರ್ಚ್ ಧರ್ಮಗುರು ಬಂಧನ
ಮಂಗಳೂರು: ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಗರದ ಚರ್ಚ್ವೊಂದರ ಧರ್ಮಗುರು ಸಿಪ್ರಿಯನ್ ಪಿಂಟೋ ಅವರನ್ನು ಸಂಬಂಧಿಕರೊಬ್ಬರ ಮನೆಯಿಂದ ಪೊಲೀಸರು ಬಂಧಿಸಿದ್ದಾರೆ.
ಸಿಪ್ರಿಯನ್ ಪಿಂಟೋ ಅವರು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಂತ್ರಸ್ತರು ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ಹಾಗೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ದೂರಿನ ಹಿನ್ನೆಲೆಯಲ್ಲಿ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಂಬಂಧ ಪೊಲೀಸರು ಧರ್ಮಗುರು ಸಿಪ್ರಿಯನ್ ಪಿಂಟೋ ಅವರನ್ನು ಬಂಧಿಸಲಾಗಿದ್ದು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
