ಮಂಗಳೂರು: ಕಾಲೇಜು ವಿದ್ಯಾರ್ಥಿಗೆ ಚೂರಿಯಿಂದ ಹಲ್ಲೆ; ಪ್ರಕರಣ ದಾಖಲು

Spread the love

ಮಂಗಳೂರು: ಕಾಲೇಜು ವಿದ್ಯಾರ್ಥಿಗೆ ಚೂರಿಯಿಂದ ಹಲ್ಲೆ; ಪ್ರಕರಣ ದಾಖಲು

ಮಂಗಳೂರು: ನಗರದ ಕಾಲೇಜ್‌ ವಿದ್ಯಾರ್ಥಿಗೆ ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಚೂರಿಯಿಂದ ಹಲ್ಲೆಗೈದ ಘಟನೆ ಶನಿವಾರ ಮಧ್ಯಾಹ್ನ ನಡೆದಿರುವುದಾಗಿ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ನಿವಾಸಿ, ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿ ಮುಹಮ್ಮದ್ ಉನೈಸ್ (20)ಗೆ ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಕಾಟಿಪಳ್ಳದ ರಿಯಾನ್ ಎಂಬಾತ ಹಲ್ಲೆಗೈದು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಉನೈಸ್‌ನ ಸ್ನೇಹಿತ ರಾಯಿಝ್ ಮತ್ತು ಕಾಟಿಪಳ್ಳದ ರಿಯಾನ್ ಮಧ್ಯೆ ಯಾವುದೋ ವಿಚಾರದಲ್ಲಿ ಜಗಳವಾಗಿತ್ತು ಎನ್ನಲಾಗಿದೆ. ಈ ವೇಳೆ ರಿಯಾನ್ ಏಕಾಎಕಿ ಉನೈಸ್‌ಗೆ ಕೈಯಿಂದ ಹಲ್ಲೆ ನಡೆಸಿದ್ದ ಎಂದು ಆರೋಪಿಸಲಾಗಿದೆ. ಮಧ್ಯಾಹ್ನದ ವೇಳೆ ಕಾಲೇಜಿನ ಕ್ಯಾಂಟೀನ್ ಬಳಿ ಬಂದ ರಿಯಾನ್ ಮತ್ತಿತರ ಐದು ಮಂದಿಯ ತಂಡವೊಂದು ಉನೈಸ್‌ನ ತಲೆ, ಬೆನ್ನು, ಎಡಕಿವಿಗೆ ಚೂರಿಯಿಂದ ಹಲ್ಲೆಗೈದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಉನೈಸ್‌ನನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments