ಮಂಗಳೂರು: ಜಿಲ್ಲಾಡಳಿತದ ರಜೆ ಆದೇಶ ಮೀರಿ ತರಗತಿ ನಡೆಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

Spread the love

ಮಂಗಳೂರು: ಜಿಲ್ಲಾಡಳಿತದ ರಜೆ ಆದೇಶ ಮೀರಿ ತರಗತಿ ನಡೆಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದು, ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ಯಾವುದೇ ಶಿಕ್ಷಣ ಸಂಸ್ಥೆ ತರಗತಿಗಳನ್ನು ನಡೆಸಿರುವುದು ಕಂಡುಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಜುಲೈ 2ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳು ಮತ್ತು 12ನೇ ತರಗತಿವರೆಗಿನ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಆದರೆ, ಕೆಲವು ಖಾಸಗಿ ಶಾಲೆಗಳು, ಕಾಲೇಜುಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳು ರಜೆ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಲಿವೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ.

ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ಯಾವುದೇ ಶಿಕ್ಷಣ ಸಂಸ್ಥೆ ತರಗತಿಗಳನ್ನು ನಡೆಸಿರುವುದು ಕಂಡುಬಂದಲ್ಲಿ, ಸಂಬಂಧಪಟ್ಟ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಜಿಲ್ಲಾಡಳಿತದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments