ಮಂಗಳೂರು | ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ

Spread the love

ಮಂಗಳೂರು | ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ

ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ಪಡೀಲ್ ಬಳಿ ತಡೆದು ಪರಿಶೀಲನೆ ನಡೆಸಿದ್ದಾರೆ.

ಭಜರಂಗ ದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಆಧಾರದ ಮೇಲೆ ಕಂಕನಾಡಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, 17 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಈ ವೇಳೆ ಸಾಗಾಟದಲ್ಲಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಬಂಧಿತನಿಂದ ಮಾದಕ ವಸ್ತು ಕೂಡ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕಂಕನಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


Spread the love
Subscribe
Notify of

0 Comments