ಮಂಗಳೂರು:  ಧರೆ ಕುಸಿದು ಮಣ್ಣಿನಡಿ ಸಿಲುಕಿದ ವ್ಯಕ್ತಿ ನಿಧನ

Spread the love

ಮಂಗಳೂರು:  ಧರೆ ಕುಸಿದು ಮಣ್ಣಿನಡಿ ಸಿಲುಕಿದ ವ್ಯಕ್ತಿ ನಿಧನ

ಮಂಗಳೂರು :  ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಗುರುವಾರ (ಮೇ 21) ನಡೆದಿದೆ.

ಉರ್ವ ಅಶೋಕನಗರ ನಿವಾಸಿ ಆಂಟನಿ ಮಸ್ಕರೇನ್ಹಸ್ (65) ಮೃತರು. ಸ್ಥಳಕ್ಕೆ ಧಾವಿಸಿದ ಕದ್ರಿ ಅಗ್ನಿಶಾಮಕ ಠಾಣೆ ಸಿಬಂದಿ ಕಾರ್ಯಾಚರಣೆ ನಡೆಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ ಅವರನ್ನು ಉಳಿಸಲಾಗಲಿಲ್ಲ.

ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮನೆಯೊಂದರ ಹಿಂಭಾಗದಲ್ಲಿ ಅವರಣ ಗೋಡೆ ನಿರ್ಮಾಣಕ್ಕೆ ಅಳತೆ ಮಾಡುತ್ತಿದ್ದಾಗ ಧರೆ ಜರಿದು ಅವಘಡ ಸಂಭವಿಸಿದೆ.

ಅವರಣ ಗೋಡೆ ನಿರ್ಮಾಣಕ್ಕೆ ಸೆಂಟೋನಿನರ್ ಗುತ್ತಿಗೆ ವಹಿಸಿಕೊಂಡಿದ್ದರು. ಇತರ ನಾಲ್ವರು ಕಾರ್ಮಿಕರೊಂದಿಗೆ ಸ್ಥಳಕ್ಕೆ ಬಂದು ಪರಿಶೀಲನೆ ಮಾಡುತ್ತಿದ್ದರು. ಮಣ್ಣಿನಡಿ ಬಿದ್ದು ಗಾಯಗೊಂಡಿದ್ದ ಆಂಟನಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೇಲ್ಬಾಗದಲ್ಲಿ ಮನೆಯೊಂದಿದ್ದು, ಕಳೆದ ವರ್ಷ ಮಳೆಗಾಲದಲ್ಲಿ ಜರಿದಿದ್ದ ಹಿನ್ನೆಲೆಯಲ್ಲಿ ಆವರಣ ಗೋಡೆ ನಿರ್ಮಾಣಕ್ಕೆ ಉದ್ದೇಶಿಸಲಾಗಿತ್ತು.


Spread the love
Subscribe
Notify of

0 Comments
Inline Feedbacks
View all comments