ಮಂಗಳೂರು: ವಿಮಾನ ದುರಂತದ ಅಣಕು ಕಾರ್ಯಾಚರಣೆ ಯಶಸ್ವಿ
ಮಂಗಳೂರು: ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ವಿಮಾನವೊಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಅಪಘಾತಕ್ಕೀಡಾಗಿದೆ ಎಂಬ ಕಾಲ್ಪನಿಕ ಸನ್ನಿವೇಶವನ್ನು ಸೃಷ್ಟಿಸಿ, ವಿಮಾನ ನಿಲ್ದಾಣದಲ್ಲಿ ಸಮಗ್ರ ಅಣಕು ಕಾರ್ಯಾಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಪ್ರಯಾಣಿಕರ ರಕ್ಷಣೆ, ಸ್ಥಳಾಂತರ ಹಾಗೂ ತುರ್ತು ವೈದ್ಯಕೀಯ ನೆರವಿನ ಕುರಿತು ಅಣಕು ಕಾರ್ಯಾಚರಣೆ ನಡೆಸಲಾಯಿತು.
ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಬೆಳಿಗ್ಗೆ 11:20ಕ್ಕೆ ಪುನರಾರಂಭಗೊಂಡವು.
ಗಮನಿಸಿ: ಯಾವುದೇ ನೈಜ ವಿಮಾನ ಅಪಘಾತ ಸಂಭವಿಸಿಲ್ಲ. ಇದು ತುರ್ತು ಪರಿಸ್ಥಿತಿ ನಿರ್ವಹಣೆಯ ಸಿದ್ಧತೆ ಪರಿಶೀಲಿಸಲು ನಡೆಸಿದ ಅಣಕು ಕಾರ್ಯಾಚರಣೆಯ ದೃಶ್ಯವಾಗಿದೆ.
