Spread the love
ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತೆ ಮೀನಾಕ್ಷಿ ಆರ್ಯ ವರ್ಗಾವಣೆ
ಮಂಗಳೂರು: ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅವರನ್ನು ನಿಯುಕ್ತಿಗೊಳಿಸಲಾಗಿದೆ.
ತೆರವಾದ ಮೀನಾಕ್ಷಿ ಆರ್ಯ ಅವರ ಸ್ಥಾನಕ್ಕೆ ಸರಕಾರ ಯಾರನ್ನೂ ನೇಮಕಗೊಳಿಸಿಲ್ಲ.
Spread the love













