Home Mangalorean News Kannada News ಮಂಗಳೂರು: ಶಾಂಭವಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಮಂಗಳೂರು: ಶಾಂಭವಿ ನದಿಗೆ ಹಾರಿ ಯುವಕ ಆತ್ಮಹತ್ಯೆ

Spread the love

ಮಂಗಳೂರು: ಶಾಂಭವಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಮಂಗಳೂರು: ಗುರುಪುರ ಸಮೀಪದ ಶಾಂಭವಿ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಮೃತರನ್ನು ಕೌಶಿಕ್ (21) ಎಂದು ಗುರುತಿಸಲಾಗಿದೆ. ಇವರು ಬಸ್ ಏಜೆಂಟ್ ಹಾಗೂ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಕೌಶಿಕ್ ಅವರು ತಮ್ಮ ಸ್ಕೂಟರನ್ನು ಸೇತುವೆಯ ಮೇಲೆ ನಿಲ್ಲಿಸಿ ಬಳಿಕ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


Spread the love

Exit mobile version