ಅ. 29 ರಂದು ಉಡುಪಿ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Spread the love

ಅ. 29 ರಂದು ಉಡುಪಿ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಅಕ್ಟೋಬರ್ 29 ರಂದು ಗುರುವಾರ ನಗರದ ಅಜ್ಜರಕಾಡು ಪುರಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2.30 ರ ತನಕ ಆಯೋಜಿಸಲಾಗಿದೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ತೀರಾ ಬಡತನದಲ್ಲಿರುವ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು, ಆಸಕ್ತ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಬಡ ರೋಗಿಗಳ ಜೀವ ಉಳಿಸುವ ಪುಣ್ಯಕಾರ್ಯಕ್ಕೆ ಸಹಕಾರ ನೀಡುವಂತೆ ವಿನಂತಿ ಕೊಳ್ಳಲಾಗಿದೆ

ರಕ್ತದಾನಿಗಳು 9449894375 (ಸತೀಶ್ ಪುತ್ರನ್), 9880058581 (ಸುಕೇಶ್ ಕುಂದರ್) 8150824123 (ಸತೀಶ್ ಕೊಡವೂರು) ಇವರುಗಳನ್ನು ಸಂಪರ್ಕಿಸಲು ಕೋರಲಾಗಿದೆ.


Spread the love
Subscribe
Notify of

0 Comments