ಪಣಂಬೂರು ಬೀಚ್ ಎದುರು ಟ್ರೇಲರ್ ಲಾರಿ ಅಡ್ಡಲಾಗಿ ನಿಂತು ಭಾರೀ ಟ್ರಾಫಿಕ್ ಜಾಮ್
ಮಂಗಳೂರು: ಪಣಂಬೂರು ಬೀಚ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರೇಲರ್ ಲಾರಿಯೊಂದು ರಸ್ತೆಗೆ ಅಡ್ಡಲಾಗಿ ನಿಂತ ಪರಿಣಾಮ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.
ಬೈಕಂಪಾಡಿ ಕಡೆಯಿಂದ ಕೂಳೂರು ಕಡೆಗೆ ಸಾಗುವ ರಸ್ತೆಯಲ್ಲಿ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಆಗಮಿಸಿ ರಸ್ತೆಗೆ ಅಡ್ಡಲಾಗಿ ನಿಂತಿದ್ದ ವಾಹನವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಟ್ರಾಫಿಕ್ ಜಾಮ್ನಿಂದಾಗಿ ಸಾರ್ವಜನಿಕರು ರಸ್ತೆಯಲ್ಲೇ ದೀರ್ಘಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸವಾರರು ಹಾಗೂ ಪ್ರಯಾಣಿಕರು ತೀವ್ರವಾಗಿ ಹೈರಾಣಾಗಿದ್ದಾರೆ.
