Home Mangalorean News Kannada News ಮೇ.30: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆ

ಮೇ.30: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆ

Spread the love

ಮೇ.30: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆ

ಉಡುಪಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ , ಡಿಸೇಲ್ ಅಡುಗೆ ಅನಿಲದ ನಿರಂತರ ಬೆಲೆ ಏರಿಕೆ ಮಾಡುತ್ತ ಜನರ ಬದುಕು ದುಸ್ತರ ಗೊಳಿಸಿರುವುದರ ವಿರುದ್ಧ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ವಿರುದ್ಧ (SIR) ಹಾಗೂ ನೀಟ್ ಪ್ರಶ್ನೆಪತ್ರಿಕೆಯ ಸೋರಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಕ್ಷದ ಮುಂಚೂಣಿ ಘಟಕಗಳ ಸಹಭಾಗಿತ್ವದಲ್ಲಿ ಮೇ 30 ರಂದು ಶನಿವಾರ ಪ್ರತಿಭಟನೆ ನಡೆಯಲಿದೆ.

ಅಂದು ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿ ಕಾಂಗ್ರೆಸ್ ಭವನದಿಂದ ಜೋಡುಕಟ್ಟೆ ತನಕ ಬೃಹತ್ ಪ್ರತಿಭಟನಾ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ


Spread the love

Exit mobile version