Home Mangalorean News Kannada News ನಾಳೆ ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ: 448 ಕಂಪನಿ, 16631 ಅಭ್ಯರ್ಥಿಗಳ ನೋಂದಣಿ

ನಾಳೆ ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ: 448 ಕಂಪನಿ, 16631 ಅಭ್ಯರ್ಥಿಗಳ ನೋಂದಣಿ

Spread the love

ನಾಳೆ ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ: 448 ಕಂಪನಿ, 16631 ಅಭ್ಯರ್ಥಿಗಳ ನೋಂದಣಿ

ಮಂಗಳೂರು: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ದ.ಕ. ಜಿಲ್ಲಾಡಳಿತದ ಆಶ್ರಯದಲ್ಲಿ ಸೋಮವಾರ ಬೃಹತ್ ಉದ್ಯೋಗ ಮೇಳ ನಗರದ ಅಲೋಸಿಯಸ್ ಕಾಲೇಜು ಆವರಣದಲ್ಲಿ ನಡೆಯಲಿದೆ.

ಉದ್ಯೋಗ ಮೇಳಕ್ಕೆ 448ಕ್ಕೂ ಅಧಿಕ ಕಂಪನಿಗಳು ಹಾಗೂ 16631 ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಯುವ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಿಂದ 7477 ಹಾಗೂ ಉಡುಪಿ ಜಿಲ್ಲೆಯಿಂದ 1791 ಅಭ್ಯರ್ಥಿಗಳು ನೋಂದಣಿ ಮಾಡಿದ್ದಾರೆ.

ಯುವಜನತೆಗೆ ಸೂಕ್ತ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಈ ಮೇಳ ಉದ್ದೇಶವಾಗಿದೆ. ಕಂಪನಿಗಳು ಸ್ಥಳದಲ್ಲೇ ಪ್ರಾಥಮಿಕ ಸಂದರ್ಶನ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಹೊಸದಾಗಿ ಪದವಿ ಪಡೆದವರು ಹಾಗೂ ಅನುಭವಿ ಅಭ್ಯರ್ಥಿಗಳಿಬ್ಬರೂ ಒಂದೇ ಸೂರಿನಡಿ ಕಂಪನಿಗಳಿಗೆ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ತಾಂತ್ರಿಕ ಕೌಶಲ್ಯಗಳ ಅನುಗುಣವಾಗಿ ತರಬೇತಿ ಅಥವಾ ಕೋರ್ಸ್‌ಗಳನ್ನು ಆಯ್ಕೆ ಮಾಡಲು ಈ ಮೇಳ ಸಹಕಾರಿಯಾಗಲಿದೆ.

ಉಚಿತ ಬಸ್ ಸೇವೆ
ನಗರದ ಪ್ರಮುಖ ಕೇಂದ್ರಗಳಿಂದ ಉದ್ಯೋಗ ಮೇಳ ನಡೆಯುವ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಆವರಣದವರೆಗೆ ಸೋಮವಾರ ಕೆ ಎಸ್ ಆರ್ ಟಿ ಸಿ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಬಿಜೈ ಕೆ ಎಸ್ ಆರ್ ಟಿ ಸಿ ನಿಲ್ದಾಣಗಳಿಂದ ನಿರಂತರ ಬಸ್ ಕಾರ್ಯಾಚರಿಸಲಿದೆ. ಅಭ್ಯರ್ಥಿಗಳಿಗೆ ಮತ್ತು ಉದ್ಯೋಗದಾತರಿಗೆ ಉಚಿತ ಊಟ, ಕುಡಿಯುವ ನೀರು ಹಾಗೂ ಶೌಚಾಲಯ ಹಾಗೂ ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಏರ್ಪಡಿಸಲಾಗಿದೆ.

ಜಿಲ್ಲಾಧಿಕಾರಿ ಅಂತಿಮ ಸಿದ್ಧತೆಗಳ ಪರಿಶೀಲನೆ
ನಗರದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರು ಭಾನುವಾರ ಹಿರಿಯ ಅಧಿಕಾರಿಗಳೊಂದಿಗೆ ಅಂತಿಮ ಸಿದ್ಧತೆಗಳ ಪರಿಶೀಲನಾ ಸಭೆ ನಡೆಸಿದರು.
ಉದ್ಯೋಗ ಮೇಳದ ಆವರಣಕ್ಕೆ ಅಭ್ಯರ್ಥಿಗಳು ಸುಗಮವಾಗಿ ಆಗಮಿಸಲು ಅನುಕೂಲವಾಗುವಂತೆ ಕೈಗೊಂಡಿರುವ ಸಂಚಾರ ವ್ಯವಸ್ಥೆ, ಕುಡಿಯುವ ನೀರು ಹಾಗೂ ಉಪಹಾರದ ವ್ಯವಸ್ಥೆಗಳನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು. ಅಲ್ಲದೆ, ಹೊಸ ಉದ್ಯೋಗಾಕಾಂಕ್ಷಿಗಳ ನೋಂದಣಿ ಹಾಗೂ ಈಗಾಗಲೇ ನೋಂದಣಿ ಹೊಂದಿರುವವರ ದಾಖಲೆಗಳ ಅಧಿಕೃತ ಪರಿಶೀಲನೆಗಾಗಿ ಮಾಡಲಾಗಿರುವ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದರು.

ಕೌಂಟರ್‌ ಗಳ ವ್ಯವಸ್ಥೆ ಹಾಗೂ ಸಂದರ್ಶನ ಪ್ರಕ್ರಿಯೆ
ಮೇಳ ನಡೆಯಲಿರುವ ಸಂತ ಅಲೋಶಿಯಸ್ ಕಾಲೇಜು ಆವರಣದಲ್ಲಿ ಅಭ್ಯರ್ಥಿಗಳು ಮತ್ತು ಉದ್ಯೋಗದಾತರ ಅನುಕೂಲಕ್ಕಾಗಿ ವಿಶೇಷ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. 24 ಆನ್‌ಲೈನ್ ನೋಂದಣಿ ಕೌಂಟರ್‌ಗಳು, ಅಧಿಕಾರಿಗಳ ಕೌಂಟರ್‌ಗಳು, 3 ಉದ್ಯೋಗದಾತರ ಕೌಂಟರ್‌ಗಳು, 1 ಭೌತಿಕ ನೋಂದಣಿ ಕೌಂಟರ್ ಸ್ಥಾಪಿಸಲಾಗಿದೆ.

ಅಭ್ಯರ್ಥಿಗಳು ನೇರವಾಗಿ ಈ ಕೌಂಟರ್‌ಗಳಿಗೆ ಆಗಮಿಸಿ ತಮ್ಮ ನೋಂದಣಿಯನ್ನು ಖಚಿತಪಡಿಸಿಕೊಂಡ ನಂತರ ಅವರಿಗೆ ಬಾರ್ ಕೋಡ್ (Bar Code) ನೀಡಲಾಗುವುದು. ಬಾರ್ ಕೋಡ್ ಪಡೆದ ಅಭ್ಯರ್ಥಿಗಳು ನೇರವಾಗಿ ತಮಗೆ ಸೂಚಿಸಿದ ಉದ್ಯೋಗದಾತರ ಕೊಠಡಿಗೆ ತೆರಳಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಯಾವುದೇ ಕಾರಣಕ್ಕೂ ಉದ್ಯೋಗ ಮೇಳದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ, ವ್ಯವಸ್ಥೆಯಲ್ಲಿ ಲೋಪದೋಷಗಳು ಕಂಡುಬರದಂತೆ ಹಾಗೂ ಸಂಚಾರ ದಟ್ಟಣೆ ಉಂಟಾಗದಂತೆ ನಿರಂತರ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅರ್ಹತೆ: ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್ ಸೇರಿದಂತೆ ವಿವಿಧ ಶೈಕ್ಷಣಿಕ ಅರ್ಹತೆ ಹೊಂದಿರುವ ಹೊಸಬರು ಮತ್ತು ಅನುಭವಿ ಅಭ್ಯರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಅವಕಾಶವಿದೆ.

ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ yuvaudyogasethu.karnataka.gov.in/services/events ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 9606494308 ಸಹಾಯವಾಣಿಯನ್ನು ಸಂಪರ್ಕಿಸಬಹುದು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version