ವಿಶ್ವ ಬಾಹ್ಯಾಕಾಶ ಸಪ್ತಾಹದ ಅಂಗವಾಗಿ ಸ್ಮರಣ ಶಕ್ತಿ ಮತ್ತು ರಸಪ್ರಶ್ನೆ ಸ್ಪರ್ಧೆ
ಮಂಗಳೂರು: ವಿಶ್ವ ಬಾಹ್ಯಾಕಾಶ ಸಪ್ತಾಹ ಅಂಗವಾಗಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರಿನ ಯು ಆರ್ ಉಪಗ್ರಹ ಕೇಂದ್ರ ಇಸ್ರೋ ಸಹಯೋಗದೊಂದಿಗೆ ಗುರುವಾರ ಸ್ಮರಣ ಶಕ್ತಿ ಮತ್ತು ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಎನ್.ಐ.ಟಿ.ಕೆ ಸುರತ್ಕಲ್ ನಿವೃತ್ತ ಪ್ರಾಧ್ಯಾಪಕ ಪೆÇ್ರ. ಜಿ.ಶ್ರೀನಿಕೇತನ್ ಮಾತನಾಡಿ, ಇಸ್ರೋ ವಿಜ್ಞಾನಿಗಳು ಪಿಲಿಕುಳಕ್ಕೆ ಬಂದು ಅವಿಭಜಿತ ದ.ಕ ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಸಂವಾದ ನಡೆಸುವುದರ ಮೂಲಕ, ಇಸ್ರೋದ ಹಿಂದಿನ ಸಾಧನೆಗಳು, ಪ್ರಸ್ತುತ ಬಾಹ್ಯಾಕಾಶ ಯೋಜನೆಗಳು ಹಾಗೂ ಭವಿಷ್ಯದ ಬಾಹ್ಯಾಕಾಶ ಅನ್ವೇಷಣೆಯ ಸಾಧ್ಯತೆಗಳ ಕುರಿತು ಮಾಹಿತಿ ನೀಡುತ್ತಿದ್ದಾರೆ. “ಆಕಾಶಕ್ಕೆ ಯಾವುದೇ ಮಿತಿಯಿಲ್ಲ, ಬಾಹ್ಯಾಕಾಶದ ಅನಂತ ಸಾಧ್ಯತೆಗಳನ್ನು ಅನ್ವೇಷಿಸುವುದು ಮುಂದಿನ ಪೀಳಿಗೆಯ ಜವಾಬ್ದಾರಿ” ಎಂಬ ಆಶಯದೊಂದಿಗೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕುತೂಹಲ, ಸಂಶೋಧನಾ ಮನೋಭಾವ ಹಾಗೂ ಹೊಸ ಆವಿμÁ್ಕರಗಳತ್ತ ಆಸಕ್ತಿ ಮೂಡಿಸಲು ಪ್ರೇರೇಪಿಸಿದರು.
ಯು.ಆರ್.ಎಸ್.ಸಿ ಅಧ್ಯಕ್ಷ ವೀರೇಂದ್ರ ಆರ್ ಕವಿ ಶೆಟ್ಟಿ, ಮಾತನಾಡಿ, ಹೊಸ ತಂತ್ರಜ್ಞಾನ ಯುಗದಲ್ಲಿ ಕಂಪ್ಯೂಟರ್, ಮೊಬೈಲ್ ಮತ್ತು ಜಿಪಿಎಸ್ ವ್ಯವಸ್ಥೆ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗಗಳಾಗಿದೆ. ಇವುಗಳ ಅಭಿವೃದ್ಧಿ ಹಾಗೂ ಕಾರ್ಯನಿರ್ವಹಣೆಯಲ್ಲಿ ಉಪಗ್ರಹ ತಂತ್ರಜ್ಞಾನವು ಮಹತ್ವದ ಪಾತ್ರ ವಹಿಸುತ್ತಿದೆ. ಭವಿಷ್ಯದಲ್ಲಿ ಬಾಹ್ಯಾಕಾಶದಲ್ಲಿ ಅಂತರಿಕ್ಷ ನಿಲ್ದಾಣ ಹಾಗೂ ಸಂಶೋಧನಾ ಕೇಂದ್ರಗಳು ನಿರ್ಮಾಣ ಆಗಲಿದೆ. ಆದ್ದರಿಂದ ವಿದ್ಯಾರ್ಥಿಗಳು ಇಂದಿನಿಂದಲೇ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು, ಹೊಸ ಆಲೋಚನೆಗಳು ಮತ್ತು ಉತ್ಸಾಹದೊಂದಿಗೆ ಇಸ್ರೋ ಹಾಗೂ ಬಾಹ್ಯಾಕಾಶ ಕ್ಷೇತ್ರದ ಸೇವೆಗೆ ತಮ್ಮದೇ ಆದ ಕೊಡುಗೆಯನ್ನು ನೀಡುವಂತಾಗಲಿ ಎಂದು ಹೇಳಿದರು.
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್ ಶೆಟ್ಟಿ ಎನ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರ ದಸರಾ ರಜೆಯನ್ನು ಘೋಷಿಸಿದ್ದರೂ ಸಹ, ಬಾಹ್ಯಾಕಾಶ ಕ್ಷೇತ್ರದ ಕುರಿತು ಜ್ಞಾನವನ್ನು ಪಡೆಯುವ ಉತ್ಸಾಹದಿಂದ ಸಾವಿರಾರು ವಿದ್ಯಾರ್ಥಿಗಳು ಪಿಲಿಕುಳಕ್ಕೆ ಆಗಮಿಸಿರುವುದು ಸಂತಸದ ಸಂಗತಿ. ಪ್ರಸ್ತುತ ಪ್ರಕೃತಿ ವಿಕೋಪಗಳು ಮಾನವಕುಲದ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ, ವಿಪತ್ತುಗಳ ಮುನ್ಸೂಚನೆ, ನಿರ್ವಹಣೆ ಹಾಗೂ ಪರಿಣಾಮಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಇನ್ನಷ್ಟು ವೈಜ್ಞಾನಿಕ ಸಂಶೋಧನೆಗಳು ನಡೆಯಬೇಕಾಗಿದೆ ಎಂದು ಹೇಳಿದರು. ಪಿಲಿಕುಳವು ವಿಜ್ಞಾನ, ಪ್ರಕೃತಿ, ಪರಿಸರ, ಸಂಸ್ಕøತಿ ಹಾಗೂ ಪ್ರವಾಸೋದ್ಯಮದ ಹಲವು ಅದ್ಭುತಗಳ ತಾಣವಾಗಿದ್ದು, ವಿದ್ಯಾರ್ಥಿಗಳು ಪಿಲಿಕುಳದಲ್ಲಿರುವ ಎಲ್ಲಾ ಆಕರ್ಷಣೆಗಳನ್ನು ವೀಕ್ಷಿಸಿ, ಅವುಗಳ ಕುರಿತು ತಿಳಿದುಕೊಂಡು, ಪಿಲಿಕುಳದ ರಾಯಭಾರಿಗಳಾಗಿ ತಮ್ಮ ಶಾಲೆ, ಕಾಲೇಜು ಹಾಗೂ ಸಮಾಜದಲ್ಲಿ ಪಿಲಿಕುಳದ ವೈಶಿಷ್ಟ್ಯಗಳನ್ನು ಪರಿಚಯಿಸಬೇಕು ಎಂದು ಅವರು ಹೇಳಿದರು.
ಬಳಿಕ ಯು.ಆರ್. ರಾವ್ ಉಪಗ್ರಹ ಕೇಂದ್ರ ಇಸ್ರೋ ಉಪನಿರ್ದೇಶಕ ಡಾ. ಸಿ.ಎಸ್ ಮಧುಸೂದನ ಅವರು ಸಪ್ತಾಹದ ಅಂಗವಾಗಿ ʼರಾಕೆಟ್ ಕ್ರಾಂತಿʼ ಕುರಿತು ಉಪನ್ಯಾಸ ನೀಡಿ ಸಂವಾದ ನಡೆಸಿದರು. ವಿದ್ಯಾರ್ಥಿಗಳಿಗೆ ಸ್ಮರಣ ಶಕ್ತಿ, ರಸಪ್ರಶ್ನೆ ಮತ್ತು ಆಶುಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.
ಬಹುಮಾನ ವಿತರಣೆ ಸಮಾರಂಭದಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ದ.ಕ.ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಡಿಪೆÇ್ಲಮ ಕಾಲೇಜಿನ ಸುಮಾರು 970 ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಅಶೋಕ್ ಕೆ.ಆರ್ ಸ್ವಾಗತಿಸಿ, ಯು.ಆರ್.ಎಸ್.ಸಿ ತಾಂತ್ರಿಕ ಅಧಿಕಾರಿ ಶರತ್ ಕುಮಾರ್ ವಂದಿಸಿದರು. ವಂದನಾ ಪ್ರಮೋದ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
