ಜ. 24 ರಿಂದ 27 ರ ವರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ ಜಿಲ್ಲಾ ಪ್ರವಾಸ
ಉಡುಪಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜನವರಿ 24 ರಿಂದ 27 ರ ವರೆಗೆ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜನವರಿ 24 ರಂದು ರಾತ್ರಿ 7.20ಕ್ಕೆ ಬೆಂಗಳೂರಿನಿಂದ ಉಡುಪಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದು ಜ.25 ರಂದು ಭಾನುವಾರ ಮಧ್ಯಾಹ್ನ 1 ಗಂಟೆಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಕಾರ್ಕಳ –ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಸ್ವರಾಜ್ ಮೈದಾನದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಕ್ರೀಡೋತ್ಸವದಲ್ಲಿ ಭಾಗವಹಿಸಲಿದ್ದು, 7 ಗಂಟೆಗೆ ಬೈಂದೂರು ಉತ್ಸವದಲ್ಲಿ ಭಾಗಿಯಾಗಿ ಉಡುಪಿಗೆ ವಾಪಾಸಾಗಿ ವಾಸ್ತವ್ಯ ಹೂಡಲಿದ್ದಾರೆ.
ಜ.26 ರಂದು ಸೋಮವಾರ ಬೆಳಿಗ್ಗೆ 8.30ಕ್ಕೆ ದೊಡ್ಡಣಗುಡ್ಡೆ ಪುಷ್ಪ ಹರಾಜು ಕೇಂದ್ರದಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದು, 9 ಗಂಟೆಗೆ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು 10.30 ಕ್ಕೆ ಉಡುಪಿಯಿಂದ ರಸ್ತೆ ಮಾರ್ಗವಾಗಿ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಯಕ್ಕೆ ಭೇಟಿ ನೀಡಿ ರಾತ್ರಿ 7 ಗಂಟೆಗೆ ಉಡುಪಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಜನವರಿ 27 ರಂದು ಸಂಜೆ 4.15 ಕ್ಕೆ ಉಡುಪಿಯಿಂದ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.













