ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವ ಯು.ಟಿ. ಖಾದರ್, ಮುಡಾ ಅಧ್ಯಕ್ಷರಿಂದ ಸ್ಥಳ ಪರಿಶೀಲನೆ

Spread the love

ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವ ಯು.ಟಿ. ಖಾದರ್, ಮುಡಾ ಅಧ್ಯಕ್ಷರಿಂದ ಸ್ಥಳ ಪರಿಶೀಲನೆ

 ಮಂಗಳೂರು: ನಗರದ ಮಂಗಳ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಕ್ರೀಡಾಂಗಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಸಮಾಲೋಚನೆ ನಡೆಸಿದ ಅವರು, ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಗಳು, ಕ್ರೀಡಾಪಟುಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳು ಹಾಗೂ ವಿವಿಧ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ಸೌಲಭ್ಯಗಳ ಅಭಿವೃದ್ಧಿ ಕುರಿತು ಚರ್ಚಿಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜಾ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತೇಜಸ್ ಶೆಟ್ಟಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಮಂಗಳ ಕ್ರೀಡಾಂಗಣವನ್ನು ಇನ್ನಷ್ಟು ಸುಸಜ್ಜಿತಗೊಳಿಸಿ, ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಪೂರಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಈ ಸ್ಥಳ ಪರಿಶೀಲನೆ ಮಹತ್ವ ಪಡೆದಿದೆ.


Spread the love
Subscribe
Notify of

0 Comments