Home Mangalorean News Kannada News ಅಪ್ರಾಪ್ತ ಬಾಲಕಿ ಕಾಣೆ: ಪತ್ತೆಗೆ ಸಾರ್ವಜನಿಕರಲ್ಲಿ ಪೊಲೀಸರ ಮನವಿ

ಅಪ್ರಾಪ್ತ ಬಾಲಕಿ ಕಾಣೆ: ಪತ್ತೆಗೆ ಸಾರ್ವಜನಿಕರಲ್ಲಿ ಪೊಲೀಸರ ಮನವಿ

Spread the love

ಅಪ್ರಾಪ್ತ ಬಾಲಕಿ ಕಾಣೆ: ಪತ್ತೆಗೆ ಸಾರ್ವಜನಿಕರಲ್ಲಿ ಪೊಲೀಸರ ಮನವಿ

ಮಂಗಳೂರು: ಉಳ್ಳಾಲ ತಾಲೂಕಿನ ಪಜೀರ್ ಅಡ್ಕ ನಿವಾಸಿಯೊಬ್ಬರ ಅಪ್ರಾಪ್ತ ಮಗಳು ಕಾಣೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪಜೀರ್ ಅಡ್ಕ ನಿವಾಸಿ ಗುಲಾಬಿ (40), ಪತಿ ಜಗದೀಶ್ ಪೂಜಾರಿ ಅವರು ನೀಡಿದ ದೂರಿನ ಪ್ರಕಾರ, ಅವರ ಮಗಳು ಚೈತನ್ಯ (16) ಹರೇಕಳ ರಾಮಕೃಷ್ಣ ಹೈಸ್ಕೂಲ್ನಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಪರೀಕ್ಷೆ ಮುಗಿಸಿ ಮನೆಯಲ್ಲಿ ಇದ್ದಳು. ಏಪ್ರಿಲ್ 12ರಂದು ಬೆಳಗ್ಗೆ ಸುಮಾರು 7.30ಕ್ಕೆ ಸ್ನೇಹಿತರ ಜೊತೆ ಪೊಳಲಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದಳು. ಆದರೆ ರಾತ್ರಿ 8 ಗಂಟೆಯವರೆಗೂ ಮನೆಗೆ ವಾಪಸ್ಸಾಗದೇ ಇದ್ದುದರಿಂದ ಕುಟುಂಬಸ್ಥರು ಆತಂಕಗೊಂಡಿದ್ದಾರೆ.

ಪೋಷಕರು ಹಾಗೂ ಸಂಬಂಧಿಕರು ಎಲ್ಲ ಕಡೆ ಹುಡುಕಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಏಪ್ರಿಲ್ 15ರಂದು ತಡವಾಗಿ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮೊ.ನಂ. 35/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 137(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಕಾಣೆಯಾದವರ ಚಹರೆ:
ಚೈತನ್ಯ (16) ಸುಮಾರು 5 ಅಡಿ ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ ಹೊಂದಿದ್ದು, ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ನೇರಳೆ ಬಣ್ಣದ ಗೌನ್ ಹಾಗೂ ಕಪ್ಪು ಬಣ್ಣದ ಕೋಟ್ ಧರಿಸಿದ್ದಳು.
ಕಾಣೆಯಾದ ಬಾಲಕಿ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 0824-2220800 ಅಥವಾ ಕೊಣಾಜೆ ಪೊಲೀಸ್ ಠಾಣೆ (0824-2220536 / 9480802350) ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.


Spread the love

Exit mobile version