Home Mangalorean News Kannada News ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Spread the love

ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಕಳೆದ 40 ದಿನಗಳಿಂದ ನಡೆಯುತ್ತಿರುವ ಪರವಾನಿಗೆ ಭೂಮಾಪಕರ ಮುಷ್ಕರದಿಂದ ಕಂದಾಯ ಇಲಾಖೆಗೆ ಸಂಬಂಧಿತ ಕಾರ್ಯಗಳು ಸ್ಥಗಿತಗೊಂಡು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು ಈ ಬಗ್ಗೆ ರಾಜ್ಯ ಸರಕಾರ ತಕ್ಷಣ ಕ್ರಮವಹಿಸುವಂತೆ ಮುಖ್ಯಮಂತ್ರಿಗಳಿಗೆ

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದಾದ್ಯಂತ ಪರವಾನಿಗೆ ಭೂಮಾಪಕರು ಕಳೆದ 40 ದಿನಗಳಿಂದ ಮುಷ್ಕರದಲ್ಲಿ ತೊಡಗಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಗಳು ಉಂಟಾಗಿವೆ. ಭೂಮಾಪನ, ಸರ್ವೇ, ಪಹಣಿ ತಿದ್ದುಪಡಿ, ಹದ್ದುಬಸ್ತು, ಖಾತೆ ಬದಲಾವಣೆ ಸೇರಿದಂತೆ ಜಮೀನು ಸಂಬಂಧಿತ ಅನೇಕ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಇದರಿಂದ ರೈತರು, ಬಡಜನರು, ಮನೆ ನಿರ್ಮಾಣಕ್ಕೆ ಸಾಲ ಪಡೆಯುವವರು ಹಾಗೂ ಸಾಮಾನ್ಯ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ರಾಜ್ಯದಾದ್ಯಂತ ಸುಮಾರು 6,000 ಪರವಾನಿಗೆ ಭೂಮಾಪಕರು, ಉಡುಪಿ ಜಿಲ್ಲೆಯಲ್ಲಿ 118 ಮಂದಿ ಹಾಗೂ ಉಡುಪಿ ತಾಲೂಕಿನಲ್ಲಿ 22 ಮುಷ್ಕರದಲ್ಲಿ ನಿರತರಾಗಿದ್ದಾರೆ.

ಸಾರ್ವಜನಿಕರು ದಿನನಿತ್ಯ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ಉಡುಪಿ ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಭೂಮಾಪನ ಅರ್ಜಿಗಳ ವಿಲೇವಾರಿ ಬಾಕಿ ಇದ್ದು ವಿಶೇಷವಾಗಿ ಉಡುಪಿ ತಾಲೂಕಿನಲ್ಲಿ 350ಕ್ಕೂ ಅಧಿಕ ಭೂಮಾಪನ ಅರ್ಜಿಗಳು ಬಾಕಿ ಯಾಗಿದೆ.

ರೈತರು, ಜಮೀನು ಖರೀದಿ/ಮಾರಾಟ ಮಾಡುವವರು, ವಾರಸುದಾರಿಕೆ ದಾಖಲೆ ಮಾಡಿಸಿಕೊಳ್ಳುವವರು ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳು ಆರ್ಥಿಕ ಮತ್ತು ಆಡಳಿತಾತ್ಮಕ ತೊಂದರೆ ಅನುಭವಿಸುತ್ತಿದ್ದಾರೆ.

ಆದುದರಿಂದ, ಈ ಗಂಭೀರ ಸಮಸ್ಯೆಯನ್ನು ತಕ್ಷಣ ಪರಿಗಣಿಸಿ ಪರವಾನಿಗೆ ಭೂಮಾಪಕರೊಂದಿಗೆ ಮಾತುಕತೆ ನಡೆಸಿ, ಸದ್ರಿಯವರ ನ್ಯಾಯ ಸಮ್ಮತ ಬೇಡಿಕೆಗಳನ್ನು ಈಡೇರಿಸಿ, ಮುಷ್ಕರವನ್ನು ಶೀಘ್ರ ಅಂತ್ಯಗೊಳಿಸುವಂತೆ ಕ್ರಮ ಕೈಗೊಳ್ಳಬೇಕು ಹಾಗೆಯೇ ಸಾರ್ವಜನಿಕ ಹಿತದೃಷ್ಟಿಯಿಂದ ಭೂಮಾಪನ ಸೇವೆಗಳು ಮರುಪ್ರಾರಂಭವಾಗುವಂತೆ ತುರ್ತು ಮಧ್ಯಪ್ರವೇಶ ಮಾಡಿ ಜನರ ಸಂಕಷ್ಟ ನಿವಾರಿಸುವಂತೆ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version