ಶೀರೂರು ಪರ್ಯಾಯ ಮಹೋತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ರಿಗೆ ಶಾಸಕ ಯಶ್ಪಾಲ್ ಸುವರ್ಣ ಆಹ್ವಾನ
ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ರವರಿಗೆ ಶೀರೂರು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಕುತ್ಯಾರು ನವೀನ್ ಶೆಟ್ಟಿ, ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್,ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಮುಖಂಡರಾದ ಶ್ರೀ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಶ್ರೀ ಪ್ರಭಾಕರ ಪೂಜಾರಿ, ಶ್ರೀ ದಿನಕರ ಬಾಬು, ಶ್ರೀ ದಿನೇಶ್ ಅಮೀನ್, ಶ್ರೀ ರಾಜೀವ್ ಕುಲಾಲ್, ಶ್ರೀಕಾಂತ ನಾಯಕ್ ಅಲೆವೂರು, ಶ್ರೀಮತಿ ರೇಷ್ಮಾ ಉದಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.












