ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯ ರಸ್ತೆ ಕಾಮಗಾರಿ ತಕ್ಷಣ ನಡೆಸಲು ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

Spread the love

ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯ ರಸ್ತೆ ಕಾಮಗಾರಿ ತಕ್ಷಣ ನಡೆಸಲು ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಉಡುಪಿ ನಗರಸಭೆಯ ಬೈಲೂರು ವಾರ್ಡಿನಲ್ಲಿ ನಗರಸಭಾ ನಿಧಿಯಿಂದ ಸುಮಾರು 97 ಲಕ್ಷ ವೆಚ್ಚದಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿಯಿಂದ ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆ, ವ್ಯಾಪಕ ಧೂಳು ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ತಕ್ಷಣ ರಸ್ತೆ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದರು.

ಪಿಪಿಸಿ ಕಾಲೇಜು,ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಭಾಗದ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ನಡೆಯುತ್ತಿದ್ದು, ಕೆಲವು ಭಾಗಗಳಲ್ಲಿ ಬಂಡೆ ಸಿಕ್ಕಿದ ಪರಿಣಾಮ ಕಾಮಗಾರಿ ನಿಧಾನಗತಿಯಲ್ಲಿ ನಡೆದ ಕಾರಣ ಸಮಸ್ಯೆ ಉಂಟಾಗಿದ್ದು, ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ತಕ್ಷಣ ಮುಖ್ಯ ರಸ್ತೆ ಡಾಮರೀಕರಣ ಕಾಮಗಾರಿ ನಡೆಸಿ ಕಾಮಗಾರಿ ಸಂದರ್ಭದಲ್ಲಿ ಸುಗಮ ವಾಹನ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ ಶೀಘ್ರ ಕಾಮಗಾರಿ ಪೂರ್ಣಗೊಳಿಸಬೇಕು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಕಿರಣ್ ಕುಮಾರ್ ಬೈಲೂರು, ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಪ್ರಮುಖರಾದ ರತ್ನಾಕರ ಶೇರಿಗಾರ್, ವಸಂತ ರಾಜ್ ಚಂದನ್, ರಮೇಶ್, ರಂಜಿತ್, ನಿತಿನ್ ಪೈ, ಮನ್ಸುಖ್ ಲಾಲ್ ಪಟೇಲ್, ನಗರಸಭೆಯ ಇಂಜಿನಿಯರ್ ದಿವಾಕರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.


Spread the love
Subscribe
Notify of

0 Comments