ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಪೂರಕವಾಗಿ ಬಂದರು ಗೇಟ್ ಮರು ವಿನ್ಯಾಸಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

Spread the love

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಪೂರಕವಾಗಿ ಬಂದರು ಗೇಟ್ ಮರು ವಿನ್ಯಾಸಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಉಡುಪಿ : ಮಲ್ಪೆ ಮೀನುಗಾರಿಕಾ ಬಂದರಿನ ಪ್ರಸ್ತಾವಿತ ನೂತನ ಗೇಟ್ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಪೂರಕವಾಗಿ ಮರು ವಿನ್ಯಾಸ ಮಾಡಿ ತಕ್ಷಣ ಕಾಮಗಾರಿ ನಡೆಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಂದರು ಗೇಟ್ ಹಾಗೂ ರಾಷ್ಟೀಯ ಹೆದ್ದಾರಿ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಈಗಾಗಲೇ ಮೀನುಗಾರಿಕೆ ಬಂದರು ಇಲಾಖೆಯ ಮೂಲಕ ಮಂಜೂರಾತಿ ಗೊಂಡಿರುವ 14.4 ಮೀಟರ್ ಅಗಲದ ಗೇಟ್ ಅವೈಜ್ಞಾನಿಕವಾಗಿದ್ದು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಾಗ ಬಂದರು ಪ್ರವೇಶಕ್ಕೆ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಲಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಪೂರಕವಾಗಿ ಗೇಟ್ ಅಗಲವನ್ನು 24 ಮೀಟರ್ ಮರುವಿನ್ಯಾಸ ಮಾಡುವಂತೆ ಸಲಹೆ ನೀಡಿ ಈ ಬಗ್ಗೆ ಹೆಚ್ಚುವರಿ ಅನುದಾನ ಮಂಜೂರು ಮಾಡುವಂತೆ ಇಲಾಖೆ ಸಚಿವರಿಗೆ ಹಾಗೂ ಉನ್ನತ ಅಧಿಕಾರಿಗಳಿಗೆ ತಿಳಿಸುವುದಾಗಿ ಹೇಳಿದರು.

ರಾಷ್ಟ್ರೀಯ ಹೆದ್ದಾರಿ ಮಲ್ಪೆ ಬಂದರು ಸಂಪರ್ಕಿಸುವ ಭಾಗದಲ್ಲಿ ಕಿರು ಸೇತುವೆ ನಿರ್ಮಾಣವನ್ನು ವಿಸ್ತರಿಸಿ, ಗೇಟ್ ಹಾಗೂ ಕಿರು ಸೇತುವೆ ಕಾಮಗಾರಿಯನ್ನು ಏಕಕಾಲದಲ್ಲಿ ಆರಂಭಿಸಿ ಮೀನುಗಾರಿಕಾ ಚಟುವಟಿಕೆಗೆ ಸಮಸ್ಯೆಯಾಗದಂತೆ ಬಂದರು ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಪೂರಕವಾಗಿ ಕೆಲಸ ಮಾಡುವಂತೆ ಹೇಳಿದರು.

ಬಂದರು ಇಲಾಖೆಯ ಅಧೀನದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಜಾಗವನ್ನು ತಕ್ಷಣ ತೆರವು ಮಾಡಿ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸುವಂತೆ ಬಂದರು ಅಧಿಕಾರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ನಾರಾಯಣ ಕರ್ಕೇರ, ನಗರಸಭಾ ಸದಸ್ಯರಾದ ಶ್ರೀಮತಿ ಎಡ್ಲಿನ್ ಕರ್ಕಡ, ಸುಂದರ ಕಲ್ಮಾಡಿ, ಮೀನುಗಾರ ಮುಖಂಡರಾದ ರಾಮಚಂದ್ರ ಕುಂದರ್, ದಯಾನಂದ ಸುವರ್ಣ, ಕರುಣಾಕರ ಸಾಲ್ಯಾನ್, ಶಿವಪ್ಪ ಕಾಂಚನ್, ರತ್ನಾಕರ ಸಾಲ್ಯಾನ್, ನಾಗರಾಜ ಸುವರ್ಣ, ರಮೇಶ್ ಕೋಟ್ಯಾನ್, ಸುರೇಶ್ ಕುಂದರ್, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳಾದ ಕುಮಾರ ಸ್ವಾಮಿ, ಶ್ರೀಮತಿ ಸವಿತಾ ಖಾದ್ರಿ, ಶೋಭಾ, ಪ್ರಶಾಂತ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಜುನಾಥ ನಾಯಕ್, ರಿಕ್ಷಾ ಚಾಲಕರ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments