ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಾಸಿಕ ಸಭೆ

Spread the love

ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಾಸಿಕ ಸಭೆ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಮಾಸಿಕ ಸಭೆಯು ಮಂಗಳವಾರ ಮುಡಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಮಂಗಳೂರು ನಗರದ ಅಭಿವೃದ್ಧಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.

ನಗರದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಪ್ರಗತಿ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಶಾಸಕ ವೇದವ್ಯಾಸ ಕಾಮತ್, ಮುಡಾ ಆಯುಕ್ತ ಮೊಹಮ್ಮದ್ ನಝೀರ್, ಪ್ರಾಧಿಕಾರದ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love
Subscribe
Notify of

0 Comments