Spread the love
ಮೂಡುಬಿದಿರೆ : ಖಾಸಗಿ ಬಸ್ ಪಲ್ಟಿ; ಹಲವು ಮಂದಿಗೆ ಗಾಯ
ಮೂಡುಬಿದಿರೆ : ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಬನ್ನಡ್ಕ ಸಮೀಪ ಪಲ್ಟಿಯಾಗಿ ಹಲವು ಮಂದಿ ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಯಂತ್ರಣ ತಪ್ಪದ ಬಸ್ ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Spread the love













