ಮೂಡುಬಿದಿರೆ : ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

Spread the love

ಮೂಡುಬಿದಿರೆ : ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಗೆ ಶೀಟು ಹಾಕುತ್ತಿದ್ದ ಯುವಕನೋವ೯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಮೂಡುಬಿದಿರೆಯ ಕಡೆಪಲ್ಲದಲ್ಲಿ ಗುರುವಾರ ನಡೆದಿದೆ.

ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ ಸಂತೋಷ್ ಆಚಾಯ೯ ಎಂಬವರ ಪುತ್ರ ಶೌರ್ಯ ಆಚಾರ್ಯ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.

ಶೌಯ೯ ದ್ವಿತೀಯ ಪಿಯುಸಿಯ ವಿದ್ಯಾಥಿ೯ಯಾಗಿದ್ದು ರಜೆಯಲ್ಲಿ ಕಾಮಿ೯ಕನಾಗಿ ದುಡಿಯುತ್ತಿದ್ದರೆನ್ನಲಾಗಿದೆ. ಗುರುವಾರ ಕಡಪಲ್ಲ ಗಾಂಧಿನಗರದಲ್ಲಿರುವ ರಾಯಲ್ ಪ್ಯಾರಡೈಸ್ ಕಟ್ಟಡದ ಮಹಡಿಗೆ ಶೀಟು ಹಾಕುವ ಕೆಲಸಕ್ಕೆ ಹೋಗಿದ್ದು ಅಲ್ಲಿ ನಾಲ್ಕನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಸಂದಭ೯ ಆಯ ತಪ್ಪಿ ಕೆಳಗೆ ಬಿದ್ದಿದ್ದು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕಟ್ಟಡದ ಗುತ್ತಿಗೆದಾರ ಪ್ರವೀಣ್ ಹಾಗೂ ಮಾಲಕರಾದ ನೋರ್ಟ್ ಶಾಬಾ ರೇಗೋ ಅವರು ಕೆಲಸ ಮಾಡುವಾಗ ಸರಿಯಾದ ಸುರಕ್ಷತಾ ಸಾಮಗ್ರಿಗಳನ್ನು ನೀಡದಿರುವುದೇ ಈ ದುರಂತಕ್ಕೆ ಕಾರಣವೆನ್ನಲಾಗಿದ್ದು, ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments