ಉಳ್ಳಾಲ ಕ್ಷೇತ್ರದಲ್ಲಿ ಕೆರೆಗಳ ಅಭಿವೃದ್ಧಿಗೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಚುರುಕು: ವಿವಿಧ ಸ್ಥಳಗಳ ಪರಿಶೀಲನೆ

Spread the love

ಉಳ್ಳಾಲ ಕ್ಷೇತ್ರದಲ್ಲಿ ಕೆರೆಗಳ ಅಭಿವೃದ್ಧಿಗೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಚುರುಕು: ವಿವಿಧ ಸ್ಥಳಗಳ ಪರಿಶೀಲನೆ

ಮಂಗಳೂರು: ಉಳ್ಳಾಲ ವಿಧಾನಸಭಾ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿರುವ ಕೆರೆಗಳ ಅಭಿವೃದ್ಧಿಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಕುಂಪಲ, ಅಂಬ್ಲಮೊಗರು ಹಾಗೂ ಹರೇಕಳ ಪ್ರದೇಶಗಳಲ್ಲಿನ ಕೆರೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಕೆರೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಅವರು, ಕೆರೆಗಳ ಪ್ರಸ್ತುತ ಸ್ಥಿತಿ, ಅಭಿವೃದ್ಧಿಯ ಅಗತ್ಯತೆ ಹಾಗೂ ಅವುಗಳ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆದುಕೊಂಡರು. ಕೆರೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮುಡಾ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.


Spread the love
Subscribe
Notify of

0 Comments