Spread the love
ಜಕ್ರಿಬೆಟ್ಟು ಬಂಟ್ವಾಳ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭೇಟಿ
ಮಂಗಳೂರು: ಮಾಜಿ ಸಚಿವ ಬೆಳ್ಳಿಪಾಡಿ ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಜಕ್ರಿಬೆಟ್ಟು ಬಂಟ್ವಾಳ ಸಾರ್ವಜನಿಕ ಶ್ರೀ ಗಣೇಶೋತ್ಸವದ 23ನೇ ವರ್ಷದ ಆಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕ್ರಮದ ಆಯೋಜಕರನ್ನು ಅಭಿನಂದಿಸಿದ ಸಂತೋಷ್ ಕುಮಾರ್ ಶೆಟ್ಟಿ, ಶ್ರೀ ಗಣೇಶ ದೇವರ ಆಶೀರ್ವಾದದೊಂದಿಗೆ 23ನೇ ವರ್ಷದ ಗಣೇಶೋತ್ಸವವು ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಸಾಂಸ್ಕೃತಿಕ ಪರಂಪರೆ ಹಾಗೂ ಧಾರ್ಮಿಕ ಆಚರಣೆಗಳನ್ನು ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಭಕ್ತರು ಉಪಸ್ಥಿತರಿದ್ದರು.
Spread the love













