ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾರನ್ನು ಗುಂಡಿಕ್ಕಿ ಹತ್ಯೆ

Spread the love

ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾರನ್ನು ಗುಂಡಿಕ್ಕಿ ಹತ್ಯೆ

ಉಡುಪಿ: ಜಿಲ್ಲೆಯ ಮುದರಂಗಡಿಯಲ್ಲಿ ಶುಕ್ರವಾರ (ಆ.07) ಹಾಡಹಗಲೇ ಗುಂಡಿನ ಸದ್ದು ಕೇಳಿಸಿದೆ. ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ, ಉದ್ಯಮಿ ಪ್ರಿನ್ಸ್ ಪಾಯಿಂಟ್ ಡೇವಿಡ್ ಡಿಸೋಜಾ (55 ವರ್ಷ) ಎಂಬವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಡೇವಿಡ್ ಡಿಸೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಅವರ ಕಚೇರಿಯ ಬಳಿ ಮಧಾಹ್ನ 3 ಗಂಟೆ ಸುಮಾರಿಗೆ ಶೂಟೌಟ್ ನಡೆದಿದೆ. ಬೈಕ್ ನಲ್ಲಿ ಬಂದ ” ದುಷ್ಕರ್ಮಿಗಳು ಅತಿ ಹತ್ತಿರದಿಂದ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಒಂದು ಗುಂಡು ಹಣೆಗೆ ತಗುಲಿದ್ದರೆ, ಎರಡು ಗುಂಡುಗಳು ಕೈಗೆ ತಗುಲಿದೆ. ತೀವ್ರ ಗಾಯಗೊಂಡಿದ್ದ ಡೇವಿಡ್ ಡಿ ಸೋಜ ಆಸ್ಪತ್ರೆಗೆ ಕರೆದೊಯ್ಯುವ ದಾರಿಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಪಡುಬಿದ್ರೆ ಮತ್ತು ಶಿರ್ವ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಉಡುಪಿ ಎಸ್ಪಿ ಹರಿರಾಂ ಶಂಕ‌ರ್ ಸಹಿತ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಆರೋಪಿಗಳ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ.


Spread the love
Subscribe
Notify of

0 Comments