ಮುಲ್ಕಿ: ಸ್ಕೂಟರಿಗೆ ಕಾರು ಡಿಕ್ಕಿ : ಸವಾರ ಮೃತ್ಯು
ಕಾರಿಗೆ ಸ್ಕೂಟರ್ ಡಿಕ್ಕಿಯಾಗಿ ಸವಾರನೋರ್ವ ಮೃತಪಟ್ಟ ಘಟನೆ ಮೂಲ್ಕಿ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಕಕ್ವ ನಿವಾಸಿ ಶಶಿಕುಮಾರ್ (26) ಎಂದು ಗುರುತಿಸಲಾಗಿದೆ.
ಸ್ಕೂಟರ್ ನಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸ್ಕೂಟರನ್ನು ಎಳೆದುಕೊಂಡು ಹೋಗಿದ್ದು ಸ್ಕೂಟರ್ ಸವಾರನ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿತ್ತು.
ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಮೃತ ಶಶಿಕುಮಾರ್ ಪೈಟಿಂಗ್ ವೃತ್ತಿ ಮಾಡುತ್ತಿದ್ದರು.
