ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ ನೇಮಕ
ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕ ಹಾಗೂ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿಪಿ) ಎನ್. ವಿಷ್ಣುವರ್ಧನ ಅವರನ್ನು ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2012ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ವಿಷ್ಣುವರ್ಧನ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಅವರು ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೂರು ವರ್ಷದಿಂದ ಮೈಸೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.
ವೀರಾಜಪೇಟೆ ಡಿವೈಎಸ್ಪಿ, ಮೈಸೂರು ಕೃಷ್ಣರಾಜ ಉಪ ವಿಭಾಗ ಎಸಿಪಿ, ಡಿಸಿಪಿ, ಉಡುಪಿ, ಉತ್ತರ ಕನ್ನಡ, ಮೈಸೂರು ಜಿಲ್ಲೆಯ ಎಸ್ಪಿಯಾಗಿ ಕೆಲಸ ನಿರ್ವಹಿಸಿದ ಅನುಭವ ವಿಷ್ಣುವರ್ಧನ ಅವರಿಗಿದೆ.
