Home Mangalorean News Kannada News ನಾಗರಪಂಚಮಿ: ನಾಳೆ ಆ.17ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ  ಘೋಷಣೆ

ನಾಗರಪಂಚಮಿ: ನಾಳೆ ಆ.17ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ  ಘೋಷಣೆ

Spread the love

ನಾಗರಪಂಚಮಿ: ನಾಳೆ ಆ.17ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ  ಘೋಷಣೆ

ಉಡುಪಿ: ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ, ಖಾಸಗಿ ಸಂಸ್ಥೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ನಾಗರ ಪಂಚಮಿಗೆ ರಜೆ ನೀಡುವಂತೆ ಜುಲೈ 16 ರಂದು ಜಿಲ್ಲಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಕೂಡ ಇತ್ತೀಚೆಗೆ ಮನವಿ ಮಾಡಿದ್ದರು.


Spread the love

Exit mobile version