ಮಂಗಳೂರಿನಲ್ಲಿ ₹1.60 ಲಕ್ಷ ಮೌಲ್ಯದ ಮಾದಕ ವಸ್ತು ವಶ; ಆರೋಪಿ ಬಂಧನ

Spread the love

ಮಂಗಳೂರಿನಲ್ಲಿ ₹1.60 ಲಕ್ಷ ಮೌಲ್ಯದ ಮಾದಕ ವಸ್ತು ವಶ; ಆರೋಪಿ ಬಂಧನ

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು, ಆತನ ಬಳಿಯಿದ್ದ ಸುಮಾರು 16 ಗ್ರಾಂ ತೂಕದ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸೆಪ್ಟೆಂಬರ್ 29ರಂದು ಮರಕಡ ಗ್ರಾಮದ ಬೊಂದೇಲ್‌ನಿಂದ ಮೂಡುಶೆಡ್ಡೆ ಕಡೆಗೆ ಹೋಗುವ ಡಾಮಾರು ರಸ್ತೆಯ ಬಳಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ನಿಂತಿರುವುದನ್ನು ಗಮನಿಸಿದ ಕಾವೂರು ಠಾಣೆ ಪೊಲೀಸರು ಆತನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಉಳ್ಳಾಲದ ಅಜ್ಜಿನಡ್ಕ ಗ್ರಾಮದ ನಿವಾಸಿ ಮೊಹಮ್ಮದ್ ಇರ್ಫಾನ್ ಎ.ಕೆ. (26) ಎಂಬುದು ತಿಳಿದುಬಂದಿದೆ.

ಆತನ ವಶದಲ್ಲಿದ್ದ ಸುಮಾರು 16 ಗ್ರಾಂ ತೂಕದ ಮಾದಕ ವಸ್ತುವನ್ನು ಕಾನೂನುಬದ್ಧವಾಗಿ ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ ಸುಮಾರು ₹1.60 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 128/2026ರಂತೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಆರೋಪಿಯ ವಿರುದ್ಧ ಈ ಹಿಂದೆ ದಾಖಲಾಗಿದ್ದ ಪ್ರಕರಣಗಳು:

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 02/2020ರಂತೆ ರಾತ್ರಿ ಕಳ್ಳತನ ಪ್ರಕರಣ.
ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 79/2020ರಂತೆ ರಾತ್ರಿ ಕಳ್ಳತನ ಪ್ರಕರಣ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 25/2024ರಂತೆ ಗಾಂಜಾ ಸೇವನೆ ಪ್ರಕರಣ.


Spread the love
Subscribe
Notify of

0 Comments