ಭಾರತ ದೇಶದ ಪ್ರಗತಿಯಲ್ಲಿ ನರೇಂದ್ರ ಮೋದಿಯವರ ನಾಯಕತ್ವದ ಕೊಡುಗೆ ವಿಶ್ವಕ್ಕೇ ಮಾದರಿ : ಯಶ್ಪಾಲ್ ಸುವರ್ಣ
ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ
ಉಡುಪಿ ನಗರ ಬಿಜೆಪಿ ವತಿಯಿಂದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮಣಿಪಾಲ ಆರ್. ಎಸ್. ಬಿ. ಸಭಾಭವನದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಕಳೆದ 12 ವರ್ಗಗಳಿಂದ ದೇಶದ ಪ್ರಧಾನಿಯಾಗಿ ತಮ್ಮ ದಕ್ಷ ನಾಯಕತ್ವದ ಮೂಲಕ ಭಾರತದ ಸಮಗ್ರ ಪ್ರಗತಿಗೆ ವಿಶೇಷ ಕೊಡುಗೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯವರ ದೃಢ ಸಂಕಲ್ಪ, ಸಮರ್ಥ ನಾಯಕತ್ವ ಇಂದು ವಿಶ್ವಕ್ಕೇ ಮಾದರಿಯಾಗಿದ್ದು, ಇಂದಿನ ರಕ್ತದಾನ ಶಿಬಿರದಲ್ಲಿ ಉಡುಪಿಯ 500 ಕ್ಕೂ ಮಿಕ್ಕಿ ಯುವ ಜನತೆ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿರುವುದು ನರೇಂದ್ರ ಮೋದಿ ಬಗ್ಗೆ ಯುವ ಜನತೆಯ ವಿಶ್ವಾಸಕ್ಕೆ ಸಾಕ್ಷಿ ಎಂದರು.
ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ರಕ್ತದಾನ ಶಿಬಿರದಲ್ಲಿ ಕಸ್ತೂರ್ಬಾ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತನಿಧಿ ವಿಭಾಗದ ಸಹಯೋಗದಲ್ಲಿ 518 ಯುನಿಟ್ ರಕ್ತ ಸಂಗ್ರಹಿಸಲಾಯಿತು.
ಸಮಾರಂಭದಲ್ಲಿ ಪಕ್ಷದ ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ಶ್ರೀ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಪ್ರಭಾಕರ ಪೂಜಾರಿ, ಕಿರಣ್ ಕುಮಾರ್ ಬೈಲೂರು, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ಶ್ರೀಮತಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಹಾಗೂ ನಗರ ಬಿಜೆಪಿ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
