Home Mangalorean News Kannada News ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್‌ಡಿಪಿಎಸ್ ಪ್ರಕರಣದ ಆರೋಪಿ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್‌ಡಿಪಿಎಸ್ ಪ್ರಕರಣದ ಆರೋಪಿ ಬಂಧನ

Spread the love

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್‌ಡಿಪಿಎಸ್ ಪ್ರಕರಣದ ಆರೋಪಿ ಬಂಧನ

ಮಂಗಳೂರು: ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೊಹಮ್ಮದ್ ರಫೀಕ್ (ತಂದೆ: ದಿ. ಇಬ್ರಾಹಿಂ), ಶಾಫಿ ಮಂಜಿಲ್, ತೆಕ್ಕಿಲ್, ಕಾಸರಗೋಡು, ಕೇರಳ ರಾಜ್ಯ ನಿವಾಸಿ ಎಂದು ಗುರುತಿಸಲಾಗಿದೆ.

ಆರೋಪಿತನ ವಿರುದ್ಧ ಇ & ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 03/2021 ರಡಿ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8(C) ಹಾಗೂ 20(b)(ii)(B) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿತನು ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ಆತನ ವಿರುದ್ಧ ವಾರಂಟ್ ಜಾರಿಗೊಳಿಸಿತ್ತು.

ತಲೆಮರೆಸಿಕೊಂಡಿದ್ದ ಆರೋಪಿತನ ಪತ್ತೆಗಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಶಸ್ವಿಯಾಗಿ ಆರೋಪಿಯನ್ನು ಜೂನ್ 24, 2026ರಂದು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

Exit mobile version