ಆಧುನಿಕ ಭಾರತ ನಿರ್ಮಿಸುವಲ್ಲಿ ನೆಹರೂ ಅವರು ನೀಡಿದ ಕೊಡುಗೆ ಅಪಾರ: ಪದ್ಮರಾಜ್.ಆರ್ ಪೂಜಾರಿ 

Spread the love

ಆಧುನಿಕ ಭಾರತ ನಿರ್ಮಿಸುವಲ್ಲಿ ನೆಹರೂ ಅವರು ನೀಡಿದ ಕೊಡುಗೆ ಅಪಾರ: ಪದ್ಮರಾಜ್.ಆರ್ ಪೂಜಾರಿ 

ಮಂಗಳೂರು: ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ನೆಹರೂ ಅವರು ನೀಡಿದ ಕೊಡುಗೆ ಅಪಾರ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್.ಆರ್ ಪೂಜಾರಿ ಹೇಳಿದ್ದಾರೆ.

ಮಾಜಿ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 137ನೇ ಜನ್ಮ ದಿನಾಚರಣೆ ಪ್ರಯುಕ್ತ ಶನಿವಾರ ನಗರದ ನೆಹರೂ ಮೈದಾನದಲ್ಲಿ ನೆಹರೂ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಬಳಿಕ ಅವರು ಮಾತನಾಡುತ್ತಿದ್ದರು.

ನೆಹರೂ ಅವರು ದೇಶದ ಆರ್ಥಿಕ ಅಭಿವೃದ್ಧಿಗಾಗಿ ಯೋಜನಾ ಆಯೋಗವನ್ನು ಸ್ಥಾಪಿಸಿ ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದರು. ಭಾರೀ ಕೈಗಾರಿಕೆಗಳು, ಉಕ್ಕಿನ ಕಾರ್ಖಾನೆಗಳು, ಅಣೆಕಟ್ಟುಗಳು, ವೈದ್ಯಕೀಯ ಕಾಲೇಜುಗಳು, ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳ ಸ್ಥಾಪನೆಗೆ ಆದ್ಯತೆ ನೀಡಿದರು. ದೇಶದ ಬಹುತೇಕ ಐಐಟಿಗಳು, ಸಂಶೋಧನಾ ಸಂಸ್ಥೆಗಳು ದೇಶ ಸ್ವಾತಂತ್ರ್ಯ ಗಳಿಸಿದ ಮೊದಲ 15 ವರ್ಷಗಳಲ್ಲಿ ನಿರ್ಮಾಣವಾಗಿವೆ. ಅವರ ದೂರದೃಷ್ಟಿಯ ಫಲವನ್ನು ಇಂದಿನ ಪೀಳಿಗೆ ಮಾತ್ರವಲ್ಲ, ಮುಂದಿನ ಪೀಳಿಗೆಯೂ ಅನುಭವಿಸಲಿದೆ. ಆದರೆ ಇಂದು ನೆಹರೂ ಕುಟುಂಬದ ಕೊಡುಗೆ, ಇತಿಹಾಸ ಮರೆಮಾಚುವ ಕೆಲಸ ಆಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್.ಲೋಬೊ, ಮೂಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಬ್ಲಾಕ್ ಅಧ್ಯಕ್ಷರುಗಳಾದ ಪ್ರಕಾಶ್ ಸಾಲ್ಯಾನ್, ಜೆ.ಅಬ್ದುಲ್ ಸಲೀಂ, ನಾಗೇಶ್ ಗೌಡ ಬೆಳ್ತಂಗಡಿ, ಮೋಹನ್ ಕೋಟ್ಯಾನ್, ಸತೀಶ್ ಕಾಶಿಪಟ್ಣ, ಯು.ಟಿ.ತೌಸೀಫ್ ಉಪ್ಪಿನಂಗಡಿ, ಮುಖಂಡರಾದ ಲ್ಯಾನ್ಸಿಲೋಟೊ ಪಿಂಟೋ, ನವೀನ್ ಡಿಸೋಜಾ, ಸಂಶುದ್ದೀನ್ ಕುದ್ರೋಳಿ, ನೀರಜ್ ಚಂದ್ರಪಾಲ್, ಶುಭೋದಯ ಆಳ್ವ, ಟಿ.ಕೆ.ಸುಧೀರ್, ಇಬ್ರಾಹೀಂ ನವಾಝ್, ದಿನೇಶ್ ಮುಳೂರು, ಮಲಾರ್ ಮೋನು, ಮತ್ತಿತರರು ಉಪಸ್ಥಿತರಿದ್ದರು. ಮಾಜಿ ಮೇಯರ್ ಶಶಿಧರ್ ಹೆಗ್ಡೆ ಸ್ವಾಗತಿಸಿದರು.


Spread the love
Subscribe
Notify of

0 Comments