ನೇರಳಕಟ್ಟೆ | ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಢಿಕ್ಕಿಯಾಗಿ ಸ್ಥಳದಲ್ಲೇ ಮೃತ್ಯು

Spread the love

ನೇರಳಕಟ್ಟೆ | ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಢಿಕ್ಕಿಯಾಗಿ ಸ್ಥಳದಲ್ಲೇ ಮೃತ್ಯು

ವಿಟ್ಲ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಲಾರಿ ಹರಿದ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.

ನೇರಳಕಟ್ಟೆ ನಿವಾಸಿ, ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಫಾತಿಮಾ ಇಝಾ ಇಲ್ಯಾಸ್ ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಈಕೆ ಶಾಲೆ ಬಿಟ್ಟು ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಲಾರಿ ಢಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.


Spread the love
Subscribe
Notify of

0 Comments