Home Mangalorean News Kannada News ಬಳಸಿದ ಅಡುಗೆ ಎಣ್ಣೆ ಮರುಬಳಕೆ ತಡೆಗೆ ಸರ್ಕಾರದಿಂದ ಹೊಸ ಯೋಜನೆ: ಮೂರು ತಿಂಗಳಲ್ಲಿ ಜಾರಿ :...

ಬಳಸಿದ ಅಡುಗೆ ಎಣ್ಣೆ ಮರುಬಳಕೆ ತಡೆಗೆ ಸರ್ಕಾರದಿಂದ ಹೊಸ ಯೋಜನೆ: ಮೂರು ತಿಂಗಳಲ್ಲಿ ಜಾರಿ : ಯು.ಟಿ. ಖಾದರ್

Spread the love

ಬಳಸಿದ ಅಡುಗೆ ಎಣ್ಣೆ ಮರುಬಳಕೆ ತಡೆಗೆ ಸರ್ಕಾರದಿಂದ ಹೊಸ ಯೋಜನೆ: ಮೂರು ತಿಂಗಳಲ್ಲಿ ಜಾರಿ : ಯು.ಟಿ. ಖಾದರ್

  • ಮಂಗಳೂರು, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪ್ರಾಯೋಗಿಕ ಅನುಷ್ಠಾನ; ಎಣ್ಣೆ ಮಾರಾಟಕ್ಕೆ ಪ್ರತ್ಯೇಕ ಆ್ಯಪ್ ಅಭಿವೃದ್ಧಿ

ಮಂಗಳೂರು: ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಬಳಸಿದ ಅಡುಗೆ ಎಣ್ಣೆಯನ್ನು ಮರುಬಳಕೆ ಮಾಡುವುದನ್ನು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸ ಯೋಜನೆಯೊಂದನ್ನು ರೂಪಿಸುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಈ ಯೋಜನೆ ಜಾರಿಗೆ ಬರಲಿದ್ದು, ಆರಂಭಿಕ ಹಂತದಲ್ಲಿ ಮಂಗಳೂರು, ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ ನಗರಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳಸಿದ ಅಡುಗೆ ಎಣ್ಣೆಯನ್ನು ಅಧಿಕೃತ ಕಂಪನಿಗಳಿಗೆ ಮಾರಾಟ ಮಾಡಲು ಪ್ರತ್ಯೇಕ ಆ್ಯಪ್ ಅಭಿವೃದ್ಧಿಪಡಿಸಲಾಗುತ್ತಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರು ಈ ಆ್ಯಪ್ ಮೂಲಕ ಕಂಪನಿಗಳನ್ನು ಸಂಪರ್ಕಿಸಿ, ಬಳಕೆಯಾದ ಎಣ್ಣೆಯನ್ನು ಮಾರಾಟ ಮಾಡಬಹುದಾಗಿದೆ. ಈ ಎಣ್ಣೆಯನ್ನು ಖರೀದಿಸುವ ಕಂಪನಿಗಳಿಗೆ ಸರ್ಕಾರವೇ ಅನುಮತಿ ನೀಡಲಿದೆ ಎಂದು ತಿಳಿಸಿದರು.

ಆ್ಯಪ್ ಮೂಲಕ ಎಣ್ಣೆ ಮಾರಾಟ ವ್ಯವಸ್ಥೆ ಜಾರಿಗೆ ಬಂದರೆ ಹೋಟೆಲ್‌ಗಳಲ್ಲಿ ಬಳಕೆಯಾಗುವ ಅಡುಗೆ ಎಣ್ಣೆಯ ಪ್ರಮಾಣದ ಮೇಲೆ ನಿಗಾ ಇಡಲು ಸಾಧ್ಯವಾಗಲಿದೆ. ಅಲ್ಲದೆ, ಬಳಸಿದ ಎಣ್ಣೆಯನ್ನು ಮಾರಾಟ ಮಾಡುವುದರಿಂದ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಹೆಚ್ಚುವರಿ ಆದಾಯವೂ ದೊರೆಯಲಿದೆ ಎಂದರು.

ಹೀಗೆ ಸಂಗ್ರಹಿಸಲಾದ ಬಳಸಿದ ಅಡುಗೆ ಎಣ್ಣೆಯನ್ನು ಬಯೋಡೀಸೆಲ್, ವಿಮಾನಯಾನ ಇಂಧನ (ಏವಿಯೇಷನ್ ಫ್ಯೂಯೆಲ್) ಹಾಗೂ ಸೋಪು ತಯಾರಿಕಾ ಕಂಪನಿಗಳು ತಮ್ಮ ಉತ್ಪನ್ನಗಳ ತಯಾರಿಕೆಗೆ ಬಳಸಲಿವೆ. ಧಾರ್ಮಿಕ ಕಾರ್ಯಗಳಲ್ಲಿ ದೀಪ ಬೆಳಗಿಸಲು ಬಳಸುವ ಎಣ್ಣೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.

ಇದಲ್ಲದೆ, ಏವಿಯೇಷನ್ ಕಂಪನಿಗಳಿಗೆ ಬಳಸಿದ ಅಡುಗೆ ಎಣ್ಣೆಯನ್ನು ಪೂರೈಸಲು ಅನುಕೂಲವಾಗುವಂತೆ ಆಮದು ನೀತಿಯಲ್ಲಿ ಸಡಿಲಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಮುಂದಿನ ಹಂತದಲ್ಲಿ ಮನೆಗಳಲ್ಲಿ ಬಳಕೆಯಾದ ಅಡುಗೆ ಎಣ್ಣೆಯನ್ನೂ ಖರೀದಿಸುವ ವ್ಯವಸ್ಥೆ ರೂಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವರು ತಿಳಿಸಿದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version